ಉಡುಪಿ :ನಗರದ ಅಜ್ಜರಕಾಡು ಪುರಭವನದಲ್ಲಿ ಇಂದು 'ಆಜಾದೀ ಕಾ ಅಮೃತ ವರ್ಷ್' ಸ್ವಾತಂತ್ರ್ಯ ಯೋಧರ ಸಂಸ್ಮರಣೆ-ಭಾರತ ಸಂವಿಧಾನ ವ್ಯಾಖ್ಯಾನ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮವನ್ನು ಪುತ್ತಿಗೆ ಶ್ರೀಗಳು ಉದ್ಘಾಟಿಸಿ ಆಶೀರ್ವಚನ ನೀಡಿದರು.
ಬಳಿಕ ಮಾತನಾಡಿದ ಅವರು ,ದೇಶದ ಪಂಚಾಂಗವೇ ನಮ್ಮ ಸಂವಿಧಾನವಾಗಿದೆ. ಪ್ರತಿಯೊಬ್ಬ ಭಾರತೀಯನೂ ದೈವಭಕ್ತಿ, ದೇಶ ಭಕ್ತಿಯನ್ನು ಹೊಂದಿರಬೇಕು.ಸಂವಿಧಾನ ನಮಗೆ ನೀಡಿರುವ ಹಕ್ಕಿನ ಜೊತೆಜೊತೆಗೆ ನಮ್ಮ ಜವಾಬ್ದಾರಿಯನ್ನು ಅರಿತಿರಬೇಕು ಎಂದು ಹೇಳಿದರು.
ಶಾಸಕ ಕೆ.ರಘುಪತಿ ಭಟ್ ಮಾತನಾಡಿ, ನಮ್ಮ ಸಂವಿಧಾನ ಉತ್ಕೃಷ್ಟವಾಗಿದ್ದು, ಇದರ ಬಗ್ಗೆ ಯುವಜನರಿಗೆ ತಿಳುವಳಿಕೆ ಮೂಡಿಸಲು ಸಕರಾತ್ಮಕ ಚರ್ಚೆಗಳು ನಡೆಯಬೇಕು. ಈ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಆಯೋಜಿಸ ಲಾಗಿದೆ ಎಂದರು.ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ,ವಕೀಲರ ಸಂಘದ ಅಧ್ಯಕ್ಷ ಬಿ. ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
21/05/2022 09:30 pm