ಮಂಗಳೂರು: ರೇಖಾ ಸುದೇಶ್ ರಾವ್ ರವರಿಗೆ ಕನ್ನಡ ಪಯಸ್ವಿನಿ ಪ್ರಶಸ್ತಿ – 2022 ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಹೌದು ಕನ್ನಡ ಭವನ ಮತ್ತು ಗ್ರಂಥಾಲಯ ಕಾಸರಗೋಡಿನಲ್ಲಿ ಕವಯತ್ರಿ, ಸಂಘಟಕಿ, ರಾಮ ಕ್ಷತ್ರಿಯ ಸೇವಾ ಸಂಘ ಮುಲ್ಕಿ ಸುರತ್ಕಲ್ ಅಧ್ಯಕ್ಷೆ ರೇಖಾ ಸುದೇಶ್ ರಾವ್ ಮಂಗಳೂರು ರವರಿಗೆ ಸಾಹಿತ್ತಿಕ, ಸಾಮಾಜಿಕ, ಸಾಂಸ್ಕೃತಿಕ , ಧಾರ್ಮಿಕ, ಶೈಕ್ಷಣಿಕ ರಂಗದಲ್ಲಿ ಎರಡು ದಶಕಗಳಿಂದ ಸಕ್ರೀಯವಾಗಿ ತೊಡಗಿಸಿಕೊಂಡು ಬಂದ ಹಿನ್ನೆಲೆಯಲ್ಲಿ ಈ ಪ್ರಶಸ್ತಿ ನೀಡಲಾಯಿತು.
ಕೇರಳ ರಾಜ್ಯದ ಗಡಿನಾಡು ಕಾಸರಗೋಡಿನ ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ ವಿಂಶತಿ ವರ್ಷಾಚರಣೆಯ ಅಂಗವಾಗಿ ಗ್ರಂಥಾಲಯದ ಬಯಲು ರಂಗ ಮಂಟಪದಲ್ಲಿ ಭವ್ಯ ವೇದಿಕೆಯಲ್ಲಿ ಪ್ರತಿಷ್ಠಿತ ಪ್ರಶಸ್ತಿಕನ್ನಡ ಪಯಸ್ವಿನಿ ಪ್ರಶಸ್ತಿ - 2022 ನೀಡಿ ಗೌರವಿಸಲಾಯಿತು.
Kshetra Samachara
29/05/2022 07:39 am