ಕಾರ್ಕಳ: ಕಳೆದ 43 ವರುಷಗಳಿಂದ ಮುದ್ದಣ ಕಾವ್ಯ ಪ್ರಶಸ್ತಿ ನೀಡುತ್ತ ಬಂದಿರುವ ಕಾಂತಾವರ ಕನ್ನಡ ಸಂಘವು 2022ರ ಸಾಲಿನ ಮುದ್ದಣ ಕಾವ್ಯ ಪ್ರಶಸ್ತಿಗೆ ಮುದ್ರಣಕ್ಕೆ ಸಿದ್ಧವಾಗಿರುವ ಕವನ ಸಂಗ್ರಹದ ಹಸ್ತಪ್ರತಿಗಳನ್ನು ಆಹ್ವಾನಿಸುತ್ತಿದೆ.
ಪ್ರಶಸ್ತಿಯು 10 ಸಾವಿರ ರೂ. ನಗದು, ಪ್ರಶಸ್ತಿ ಪತ್ರ ಮತ್ತು ಸನ್ಮಾನ ಒಳಗೊಂಡಿದೆ. ಆಸಕ್ತರು ಕನ್ನಡ ಸಂಘದ ಮೈಲ್ (kannadasanghakanthavara@gmail. com) ಮೂಲಕ ಮಾಹಿತಿ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಸಂಘದ ಅಧ್ಯಕ್ಷ (9900701666)ರನ್ನು ಸಂಪರ್ಕಿಸಬಹುದು. ಹಸ್ತಪ್ರತಿಗಳ ಸ್ವೀಕಾರಕ್ಕೆ ಕೊನೆಯ ದಿನಾಂಕ ಸೆಪ್ಟೆಂಬರ್ 15, ಪ್ರಶಸ್ತಿ ಘೋಷಣೆ ನವೆಂಬರ್ 1 ಆಗಿರುತ್ತದೆ ಎಂದು ಕನ್ನಡ ಸಂಘದ ಪ್ರಕಟಣೆ ತಿಳಿಸಿದೆ.
Kshetra Samachara
09/06/2022 05:13 pm