ಕುಂದಾಪುರ: ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ “ಹ್ಯಾಪಿ ಟೀನ್” ಹದಿಹರೆಯದ ಶಿಕ್ಷಣ ಮಾಹಿತಿ ಕಾರ್ಯಾಗಾರವನ್ನು ಇತ್ತೀಚೆಗೆ ಆಯೋಜಿಸಲಾಯಿತು.
ಸಂಸ್ಥೆಯ ಹಳೆವಿದ್ಯಾರ್ಥಿನಿ ರ್ಯಾಂಕ್ ವಿಜೇತೆ ಡಾ| ಸ್ವಾತಿ ಶೇಟ್ ಕಾರ್ಯಾಗಾರವನ್ನು ನಡೆಸಿಕೊಟ್ಟರು. ವಿದ್ಯಾರ್ಥಿನಿಯರ ಹದಿಹರೆಯದ ಸಮಯದಲ್ಲಿ ಆಗುವ ದೈಹಿಕ ಮತ್ತು ಮಾನಸಿಕ ಬದಲಾವಣೆಗಳಿಗೆ ಗಿಡಮೂಲಿಕೆಗಳ ಸಹಾಯದಿಂದ ಮನೆಮದ್ದುಗಳನ್ನು ಹೇಗೆ ತಯಾರಿಸಿಕೊಳ್ಳಬಹುದೆಂದು ಪ್ರಾಯೋಗಿಕವಾಗಿ ಮಾಹಿತಿ ನೀಡಿದರು. ಕಾರ್ಯಾಗಾರದ ಅಧ್ಯಕ್ಷ ಸ್ಥಾನವನ್ನು ಸಂಸ್ಥೆಯ ಪ್ರಾಂಶುಪಾಲೆ ಚಿಂತನಾ ರಾಜೇಶ್ ವಹಿಸಿದ್ದರು. ಮುಖ್ಯ ಶಿಕ್ಷಕಿ ಶುಭಾ ಕೆ. ಎನ್. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕಿ ಚೈತ್ರಾ ಎಮ್. ಪಿ. ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಶಿಕ್ಷಕಿಯರಾದ ಸರೋಜ ಆರ್., ಆಶಾಲತಾ ಎಸ್. ಶೆಟ್ಟಿ, ಪವಿತ್ರಾ ಎಸ್, ಪುತ್ರನ್, ರಂಜನಿ ಕಾರ್ಯಕ್ರಮವನ್ನು ಸಂಯೋಜಿಸಿದ್ದರು.
Kshetra Samachara
13/06/2022 07:33 pm