ಸುಳ್ಯ: ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಶಾಲೆಗಳಲ್ಲಿ ನಡೆಯುತ್ತಿರುವ ದೇಶಭಕ್ತಿ ಗೀತೆಗಳಿಗೆ ವಿದ್ಯಾರ್ಥಿಗಳ ಮನಸ್ಸಿನಲ್ಲಿ ದೇಶಭಕ್ತಿ ಜಾಗೃತಗೊಳಿಸುವ ಶಕ್ತಿ ಇದೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದರು.
ಅವರು ಸುಳ್ಯದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ ಮತ್ತು ಭಾವನಾ ಸುಗಮ ಸಂಗೀತ ಬಳಗ ಸಹಯೋಗದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ಶಾಲಾ- ಕಾಲೇಜುಗಳಲ್ಲಿ ದೇಶಭಕ್ತಿ ಗೀತೆ ಗಾಯನ ಅಭಿಯಾನ ಉದ್ಘಾಟಿಸಿ ಮಾತನಾಡಿದರು.
ʼಅಮೃತ ಭಾರತಿಗೆ ಕನ್ನಡದ ಆರತಿʼ ಕಾರ್ಯಕ್ರಮ ಸಮಾಜದ ಕಾರ್ಯಕ್ರಮ ಎಂದ ಅವರು, ಕನ್ನಡ ಸಾಹಿತ್ಯ ಪರಿಷತ್ ಮಕ್ಕಳಲ್ಲಿ ದೇಶಪ್ರೇಮ ಜಾಗೃತಿಗೊಳಿಸುವ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಸಚಿವ ಎಸ್.ಅಂಗಾರ ಮಾತನಾಡಿ, ಸುಳ್ಯ ಸ್ವಾತಂತ್ರ್ಯ ಸಂಗ್ರಾಮಕ್ಕೆ ತನ್ನದೇ ಆದ ಇತಿಹಾಸ ಇದೆ. ದೇಶದ ಮೇಲೆ ಭಕ್ತಿ ಭಾವನೆ ಯುವ ಜನತೆಯಲ್ಲಿ ಮೂಡಬೇಕು. ಸಂಸ್ಕಾರ- ತಿಳುವಳಿಕೆ ನೀಡುವ ಕಾರ್ಯಕ್ರಮ ಪೂರಕ ಎಂದರು.
ನಪಂ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಜಿಪಂ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಅರೆಭಾಷೆ ಅಕಾಡೆಮಿ ಅಧ್ಯಕ್ಷ ಲಕ್ಷ್ಮಿನಾರಾಯಣ ಕಜೆಗದ್ದೆ, ಯಕ್ಷ ರಂಗಾಯಣ ಅಧ್ಯಕ್ಷ ಜೀವನ್ ರಾಂ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
22/06/2022 04:33 pm