ಉಡುಪಿ: ಯಕ್ಷ ಶಿಕ್ಷಣ ಟ್ರಸ್ಟ್ (ರಿ.) ಉಡುಪಿ ಇದರ 2022-23ನೇ ಉಡುಪಿ ವಲಯದ ಯಕ್ಷಗಾನ ತರಬೇತಿ ಉದ್ಘಾಟನೆ ಇಂದು ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು, ಉಡುಪಿಯಲ್ಲಿ ನಡೆಯಿತು. ಯಕ್ಷ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷರು, ಶಾಸಕರಾದ ಕೆ. ರಘುಪತಿ ಭಟ್ ಅವರು 2022-23ನೇ ಸಾಲಿನ ಉಡುಪಿ ವಲಯದ ಯಕ್ಷಗಾನ ತರಬೇತಿಯನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ, ಯಕ್ಷ ಶಿಕ್ಷಣ ಟ್ರಸ್ಟ್ ಉಡುಪಿ ಪ್ರಧಾನ ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್, ಯಕ್ಷ ಶಿಕ್ಷಣ ಟ್ರಸ್ಟ್ ನ ಸದಸ್ಯರಾದ ನಾರಾಯಣ ಹೆಗಡೆ, ಯಕ್ಷಗಾನ ತರಬೇತಿದಾರರಾದ ಕೀರ್ತನಾ, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ತಾರಾದೇವಿ, ಮುಖ್ಯ ಶಿಕ್ಷಕಿ ಜಯಲಕ್ಷ್ಮಿ ಉಪಸ್ಥಿತರಿದ್ದರು.
Kshetra Samachara
25/06/2022 06:20 pm