ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಪು : ಹಯವದನ ಸಭಾಭವನ ಉದ್ಘಾಟಿಸಿದ ಸೋದೆ ಶ್ರೀಗಳು

ಕಾಪು : ಇನ್ನಂಜೆ ಎಸ್.ವಿ.ಎಸ್. ನರ್ಸರಿ ಮತ್ತು ಹಿರಿಯ ಪ್ರಾಥಮಿಕ ಶಾಲೆ ಹಾಗೂ ಎಸ್‌.ವಿ‌.ಎಚ್.ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನೂತನವಾಗಿ ನಿರ್ಮಿಸಲಾದ ಹಯವದನ ಸಭಾಭವನವನ್ನು ಉಡುಪಿ ಶ್ರೀ ಸೋದೆ ಮಠಾಧೀಶ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಉದ್ಘಾಟಿಸಿದ್ರು.

ಈ ವೇಳೆ ಮಾತನಾಡಿದ ಅವರು ಗ್ರಾಮೀಣ ಭಾಗದ ಮಕ್ಕಳಿಗೆ ಉತ್ತಮ ಸಂಸ್ಕಾರಯುತವಾದ ಶಿಕ್ಷಣವನ್ನು ಒದಗಿಸಬೇಕೆಂಬ ಉದ್ದೇಶದಿಂದ ಸೋದೆ ಮಠದ ಯತಿಗಳಾದ ವಿಶ್ವೇಂದ್ರ ತೀರ್ಥ ಶ್ರೀಪಾದರಿಂದ ಸ್ವಾತಂತ್ರ್ಯ ಪೂರ್ವದಲ್ಲಿ ಆರಂಭಗೊಂಡ ಶಿಕ್ಷಣ ಸಂಸ್ಥೆಯು ಗುರುಗಳಾದ ವಿಶ್ವೋತ್ತಮ ತೀರ್ಥ ಶ್ರೀಪಾದರ ಮೂಲಕವಾಗಿ ಅಭಿವೃದ್ಧಿಯ ಪಥದೊಂದಿಗೆ ಸಾಗುತ್ತಿದೆ. ಅದಕ್ಕೆ ಪೂರಕವಾಗಿ ನಾವು ಕೂಡಾ ಈ ಸಂಸ್ಥೆಗಳ ಜವಾಬ್ದಾರಿ ವಹಿಸಿಕೊಂಡ ಬಳಿಕ ಶಾಲೆಯ ಅಭಿವೃದ್ಧಿಗೆ ವಿವಿಧ ಯೋಜನೆಗಳನ್ನು ಹಮ್ಮಿಕೊಳ್ಳುತ್ತಿದ್ದೇವೆ ಎಂದರು.

ಈ ಸಂದರ್ಭ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ರತ್ನ ಕುಮಾರ್, ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ಉಪ ಪ್ರಾಂಶುಪಾಲ ಪ್ರೊ. ರಮೇಶ್ ಮಿತ್ತಂತಾಯ, ರಕ್ಷಕ - ಶಿಕ್ಷಕ ಸಂಘದ ಅಧ್ಯಕ್ಷ ಉಮೇಶ್ ಆಚಾರ್ಯ, ಆಡಳಿತಾಧಿಕಾರಿ ಅನಂತ ಮೂಡಿತ್ತಾಯ, ಶಾಲಾ‌ ಮುಖ್ಯೋಪಾಧ್ಯಾಯನಿಯರಾದ ಸುಷ್ಮಾ, ಮಮತಾ ಮೊದಲಾದವರು ಉಪಸ್ಥಿತರಿದ್ದರು.

Edited By : Nagesh Gaonkar
Kshetra Samachara

Kshetra Samachara

05/07/2022 06:31 pm

Cinque Terre

18.49 K

Cinque Terre

0

ಸಂಬಂಧಿತ ಸುದ್ದಿ