ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಪಠ್ಯಪುಸ್ತಕದಲ್ಲಿ ಮತ್ತೆ ನಾರಾಯಣ ಗುರುಗಳ ಪಠ್ಯ ಸೇರ್ಪಡೆ

ಮಂಗಳೂರು: ಎಸ್ಎಸ್ಎಲ್‌ಸಿ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಪಠ್ಯ ಮರುಸೇರ್ಪಡೆಗೊಂಡಿರುವ ಹಿನ್ನೆಲೆಯಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ವಿಶೇಷ ಪೂಜೆ ನೆರವೇರಿತು.

ಅಲ್ಲದೆ ಸಮಾಜದ ಪ್ರಮುಖ ಬೇಡಿಕೆಯಾಗಿರುವ ಬ್ರಹ್ಮಶ್ರೀ ನಾರಾಯಣ ಗುರು (ಬಿಲ್ಲವ ಈಡಿಗ) ನಿಗಮ ಸ್ಥಾಪನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ - ಚೆನ್ನಯ ಹೆಸರು ಮರುನಾಮಕರಣ, ಮಂಗಳೂರು ರೈಲ್ವೆ ನಿಲ್ದಾಣಕ್ಕೆ ನಾರಾಯಣ ಗುರುಗಳ ಹೆಸರು ಮರುನಾಮಕರಣ ಹಾಗೂ ಸಮಾಜದ ಏಳಿಗೆಗೆ ವಿಶೇಷ ಪೂಜೆ ನೆರವೇರಿತು. ಈ ವೇಳೆ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಂದ ನೂರಾರು ಭಕ್ತರು ಆಗಮಿಸಿ ಈ ವಿಶೇಷ ಪೂಜೆಯಲ್ಲಿ ಭಾಗವಹಿಸಿದ್ದರು.

Edited By : Nagesh Gaonkar
Kshetra Samachara

Kshetra Samachara

17/07/2022 04:32 pm

Cinque Terre

22.23 K

Cinque Terre

1