ಪುತ್ತೂರು: ಸಮರ್ಪಣಾ ಮಹಿಳಾ ಸೇವಾ ಸಮಿತಿ, ವರಮಹಾಲಕ್ಷ್ಮೀ ಪೂಜಾ ಸಮಿತಿ, ಒಡಿಯೂರು ವಜ್ರಮಾತಾ ಮಹಿಳಾ ವಿಕಾಸ ಕೇಂದ್ರ ಮತ್ತು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು ಇದರ ಆಶ್ರಯದಲ್ಲಿ 15 ನೇ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ರಂದು ನಡೆಯಿತು.
ಸಭಾ ಕಾರ್ಯಕ್ರಮವನ್ನು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಉದ್ಘಾಟಿಸಿದರು. ಈ ಬಾರಿ ಸರಕಾರದಿಂದ ಎಲ್ಲಾ ಧಾರ್ಮಿಕ ದತ್ತಿ ಇಲಾಖೆಯಲ್ಲಿ ವರಮಹಾಲಕ್ಷ್ಮೀ ಪೂಜೆಗೆ ವಿಶೇಷ ವ್ಯವಸ್ಥೆಯನ್ನು ಮಾಡಲಾಗಿದ್ದು, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ಮಾಡಲಾಗಿದೆ. ಪೂಜೆಯಲ್ಲಿ ನೂರಾರು ಸಂಖ್ಯೆಯ ಮಹಿಳೆಯರು ಸೇರಿ ಲಕ್ಷ್ಮಿಯನ್ನು ಆರಾಧಿಸಿದರು. ಸಮಾರಂಭದಲ್ಲಿ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಡಾ.ಸುಧಾ.ಎಸ್.ರಾವ್ ಮೊದಲಾದವರು ಉಪಸ್ಥಿತರಿದ್ದರು.
Kshetra Samachara
05/08/2022 02:41 pm