ಉಡುಪಿ: ಪದ್ಮಶಾಲಿ/ಶೆಟ್ಟಿಗಾರ ಸಮಾಜದ ಕುಲಕಸುಬು ಕೈಮಗ್ಗ ನೇಕಾರಿಕೆಯನ್ನು ಪುನರುಜ್ಜಿವನಗೊಳಿಸುವ ಪ್ರಯತ್ನವಾಗಿ ಉಡುಪಿಯ ಪದ್ಮಶಾಲಿ ನೇಕಾರ ಪ್ರತಿಷ್ಠಾನ ಇದೇ ಆ.7ರಂದು ಕಲ್ಯಾಣಪುರದ ಶ್ರೀಆದಿಶಕ್ತಿ ವೀರಭದ್ರ ಬ್ರಹ್ಮಲಿಂಗ ದೇವಸ್ಥಾನದ ಸಭಾಂಗಣದಲ್ಲಿ ರಾಷ್ಟ್ರೀಯ ಕೈಮಗ್ಗ ದಿನವನ್ನು ಆಚರಿಸಲು ನಿರ್ಧರಿಸಿದೆ.
ಉಡುಪಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರತಿಷ್ಠಾನದ ಅಧ್ಯಕ್ಷ ರತ್ನಾಕರ ಇಂದ್ರಾಳಿ 'ನಮ್ಮ ಕೈಮಗ್ಗ ಸೀರೆ ನಮ್ಮ ಹೆಮ್ಮೆ' ಎಂಬ ಘೋಷಣೆಯೊಂದಿಗೆ ಸಮಾಜದ ಮಹಿಳೆಯರು ಕೈಮಗ್ಗದ ಸೀರೆಗಳನ್ನು ಧರಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿ ದ್ದಾರೆ. ಕೈಮಗ್ಗದ ಸೀರೆಗಳಿಗೆ ಹೊಸ ಆಯಾಮ ನೀಡುವ, ಬಹು ಬೇಡಿಕೆಯ ಸೀರೆಗಳಾಗಿ ಪರಿವರ್ತಿಸುವ, 100 ಮಂದಿ ಕೈಮಗ್ಗದ ನೇಕಾರರು ಮತ್ತೆ ನೇಕಾರ ವೃತ್ತಿಗೆ ಮರಳುವಂತೆ ಮಾಡುವ ಯೋಜನೆ ಪ್ರತಿಷ್ಠಾನಕ್ಕಿದೆ ಎಂದರು.
ಆ.7ರಂದು ಬೆಳಗ್ಗೆ 9ಗಂಟೆಯಿಂದ ಸಂಜೆಯವರೆಗೆ ಕಾರ್ಯಕ್ರಮ ನಡೆಯಲಿದೆ. ಮೊದಲು ಎಸೆಸೆಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣಕ್ಕಾಗಿ ಅವರ ಮತ್ತು ವಿದ್ಯಾರ್ಥಿಗಳ ಪೋಷಕರ ಜೊತೆ ಸಂವಾದ ಕಾರ್ಯಕ್ರಮವನ್ನು
ಆಯೋಜಿಸಲಾಗಿದೆ. ಇದರಲ್ಲಿ ಶಿಕ್ಷಣ ತಜ್ಞರಾದ ನಾಗರಾಜ ಕಟೀಲ್, ದಿನೇಶ್ ಶೆಟ್ಟಿಗಾರ್ ಹಾಗೂ ಸದಾಶಿವ ಗೋಳಿಜೋರಾ
ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
Kshetra Samachara
05/08/2022 07:05 pm