ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಶ್ರೀಕೃಷ್ಣಮಠದಲ್ಲಿ 'ಹರ್ ಘರ್ ತಿರಂಗ" ಕ್ಕೆ ಪರ್ಯಾಯ ಶ್ರೀಗಳಿಂದ ಚಾಲನೆ

ಉಡುಪಿ: ಸ್ವಾತಂತ್ರ್ಯ ದ ಅಮೃತ ಮಹೋತ್ಸವ ಪ್ರಯುಕ್ತ ದೇಶದ ಪ್ರಧಾನಿ ನರೇಂದ್ರ ಮೋದಿಯವರ ಕರೆಯಂತೆ ಉಡುಪಿ ಶ್ರೀ ಕೃಷ್ಣಮಠದಲ್ಲಿ ಪರ್ಯಾಯ ಮಠಾಧೀಶ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದಂಗಳವರಿಗೆ ತ್ರಿವರ್ಣಧ್ವಜ ನೀಡಿ ಚಾಲನೆ ನೀಡಲಾಯಿತು.

ಅದೇ ರೀತಿ ಭಜನಾ ಸಪ್ತ ನಡೆಯುತ್ತಿರುವ ಉಡುಪಿಯ ಶ್ರೀ ಲಕ್ಷ್ಮಿ ವೆಂಕಟೇಶ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಸಿಎ ಪಿವಿ ಶೆಣೈ ಮತ್ತು ಆಡಳಿತ ಮಂಡಳಿಯ ಸದಸ್ಯರಾದ ಪುಂಡಲಿಕ ಕಾಮತ್ ಇವರಿಗೂ ರಾಷ್ಟ್ರಧ್ವಜವನ್ನು ಉಡುಪಿಯ ಶಾಸಕರಾದ ಕೆ ರಘುಪತಿ ಭಟ್ ನೀಡಿದರು.

ಅಗಸ್ಟ್ 13 ರಿಂದ ಆಗಸ್ಟ್ 15 ರವರೆಗೆ ತಮ್ಮ ಮನೆಗಳು ಮತ್ತು ಧಾರ್ಮಿಕ ಕೇಂದ್ರದ ಮೇಲೆ ರಾಷ್ಟ್ರಧ್ವಜ ಹಾರಿಸುವಂತೆ ವಿನಂತಿಸಲಾಯಿತು.ಈ ಸಂದರ್ಭದಲ್ಲಿ ನಗರಸಭೆಯ ಅಧ್ಯಕ್ಷರಾದ ಸುಮಿತ್ರಾ ನಾಯಕ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮನೋಹರ್ ಎಸ್ ಕಲ್ಮಾಡಿ, ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರುಗಳಾದ ಶ್ರೀಶ ನಾಯಕ್, ರವಿ ಅಮೀನ್,ಉಡುಪಿ ನಗರಸಭಾ ಸದಸ್ಯರಾದ ಗಿರೀಶ್ ಎಂ ಅಂಚನ್,,ಸಾಮಾಜಿಕ ಚಿಂತಕರಾದ ಪ್ರದೀಪ್ ರಾವ್, ಉಡುಪಿ ಜಿಲ್ಲಾ ಬಿಜೆಪಿ ವಕ್ತಾರರಾದ ಕೆ ರಾಘವೇಂದ್ರ ಕಿಣಿ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

09/08/2022 05:31 pm

Cinque Terre

2.51 K

Cinque Terre

0

ಸಂಬಂಧಿತ ಸುದ್ದಿ