ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಜಿಲ್ಲೆಯ ರಜತ ಮಹೋತ್ಸವ ಪ್ರಯುಕ್ತ ಅರ್ಥಪೂರ್ಣ ಕಾರ್ಯಕ್ರಮ: ಜಯಪ್ರಕಾಶ್ ಹೆಗ್ಡೆ

ಉಡುಪಿ: ಉಡುಪಿ ಜಿಲ್ಲೆ ಅಸ್ತಿತ್ವಕ್ಕೆ ಬಂದು ಆಗಸ್ಟ್ 25ಕ್ಕೆ 25 ವರ್ಷಗಳು ಪೂರ್ಣಗೊಳ್ಳುತ್ತಿದ್ದು, ಜಿಲ್ಲೆ ಸಾಗಿ ಬಂದ ಅಭಿವೃದ್ಧಿ ಕಾರ್ಯಗಳ ಪುನಾರವಲೋಕನದ ರಜತ ಮಹೋತ್ಸವ ಕಾರ್ಯಕ್ರಮವನ್ನು ಅತ್ಯಂತ ವಿಜೃಂಭಣೆಯಿಂದ ಹಮ್ಮಿಕೊಳ್ಳಲಾಗುವುದು ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.

ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಸಂಕೀರ್ಣದಲ್ಲಿ ನಡೆದ ರಜತ ಮಹೋತ್ಸವ ಕಾರ್ಯಕ್ರಮದ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಉಡುಪಿ ಜಿಲ್ಲೆಯ ಎಲ್ಲ ತಾಲೂಕುಗಳು ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಅವಿಭಾಜ್ಯ ಅಂಗವಾಗಿದ್ದು, ಜನರು ತಮ್ಮ ಕೆಲಸ ಕಾರ್ಯಗಳಿಗೆ ದೂರದ ಜಿಲ್ಲಾ ಕೇಂದ್ರವಾದ ಮಂಗಳೂರಿಗೆ ಹೋಗಿ ಬರುವುದು ಕಷ್ಟದ ಕೆಲಸವಾಗಿತ್ತು. ಪ್ರತ್ಯೇಕ ಉಡುಪಿ ಜಿಲ್ಲೆಯನ್ನು ರಚಿಸಬೇಕೆಂಬ ಜನರ ಆಶೋತ್ತರ ಹಾಗೂ ಜನಪ್ರತಿನಿಧಿಗಳ ಸತತ ಪ್ರಯತ್ನ ಮತ್ತು ಸಂಘ ಸಂಸ್ಥೆಗಳ ಹೋರಾಟದ ಫಲವಾಗಿ ಅಂದಿನ ಮುಖ್ಯಮಂತ್ರಿಗಳಾದ ಜೆ.ಹೆಚ್.ಪಟೇಲ್ 1997ರ ಆಗಸ್ಟ್ 25ರಂದು ಉಡುಪಿ ಜಿಲ್ಲೆಗೆ ಚಾಲನೆ ನೀಡುವ ಮೂಲಕ ಜಿಲ್ಲೆ ಅಸ್ಥಿತ್ವಕ್ಕೆ ಬಂದಿತ್ತು ಎಂದು ಅಂದು ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದ ಹೆಗ್ಡೆ ನೆನಪಿಸಿಕೊಂಡರು.

ಜಿಲ್ಲೆ ರಚನೆಯ ಆರಂಭಿಕ ವರ್ಷಗಳಲ್ಲಿ ಅಭಿವೃದ್ಧಿ ಕಾರ್ಯಗಳು ಅಮೆಗತಿಯಲ್ಲಿದ್ದು, ನಂತರದ ದಿನಗಳಲ್ಲಿ ಅಭಿವೃದ್ಧಿ ಪರ್ವದತ್ತ ಸಾಗಿ ರಾಜ್ಯದ ಇತರೇ ಜಿಲ್ಲೆಗಳಿಗಿಂತಲೂ ಹೆಚ್ಚಿನ ಅಭಿವೃದ್ಧಿ ಕಾರ್ಯಗಳು ಆಗಿವೆ. ಇವು ಕೇವಲ ಸರಕಾರದ ಕಾರ್ಯಗಳಲ್ಲದೇ ಖಾಸಗಿಯೂ ಸೇರಿದಂತೆ ಇತರೇ ಎಲ್ಲಾ ಕ್ಷೇತ್ರಗಳಯೂ ಅಭಿವೃದ್ಧಿಯತ್ತ ಸಾಗಿ ಮುನ್ನಡೆಯುತ್ತಿದೆ ಎಂದರು.

ರಜತ ಮಹೋತ್ಸವ ಕಾರ್ಯಕ್ರಮವನ್ನು ಹಿಂದಿನ ದಿನಗಳ ನೆನಪಿನೊಂದಿಗೆ ಮುಂದೆ ಹೋಗಬೇಕೆಂಬ ಕಲ್ಪನೆಯೊಂದಿಗೆ, ಇದೇ ಆಗಸ್ಟ್ 25ರಿಂದ 2023ರ ಜನವರಿವರೆಗೆ ಜಿಲ್ಲಾ ಹಾಗೂ ತಾಲೂಕು ಮಟ್ಟಗಳಲ್ಲಿ ವಿವಿಧ ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.ಉಡುಪಿ ಶಾಸಕ ಕೆ.ರಘುಪತಿ ಭಟ್ ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

09/08/2022 08:45 pm

Cinque Terre

6.58 K

Cinque Terre

0

ಸಂಬಂಧಿತ ಸುದ್ದಿ