ಮಣಿಪಾಲ: ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಡುಪಿ ವತಿಯಿಂದ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಆವರಣದಲ್ಲಿ, ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ, 1947ರ ಸ್ವಾತಂತ್ರ್ಯ ಸಂದರ್ಭದಲ್ಲಿ ದೇಶ ವಿಭಜನೆ ಕುರಿತ ಛಾಯಾಚಿತ್ರ ಪ್ರದರ್ಶನವನ್ನು ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎಸ್. ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಪ್ರತಿಭಾ, ವಾರ್ತಾಧಿಕಾರಿ ಮಂಜುನಾಥ್ ಬಿ., ವಾರ್ತಾ ಸಹಾಯಕರಾದ ಬಿ.ಶಿವಕುಮಾರ್, ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿಗಳು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಿಬ್ಬಂದಿಗಳು ಸಾರ್ವಜನಿಕರು ಮತ್ತಿತರರು ಉಪಸ್ಥಿತರಿದ್ದರು.
Kshetra Samachara
13/08/2022 05:48 pm