ಉಡುಪಿ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಶ್ರೀಕೃಷ್ಣ ಮಠದ ರಥಬೀದಿಯಲ್ಲಿರುವ ಕನಕಗೋಪುರ ತಿರಂಗಾ ಬಣ್ಣದ ಬೆಳಕಿನೊಂದಿಗೆ ಕಂಗೊಳಿಸುತ್ತಿದೆ.
ಶ್ರೀಕೃಷ್ಣ ಮಠದ ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಆಶ್ರಯದಲ್ಲಿ ಉಡುಪಿ ವಲಯ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್, ಗಾಂಧಿ ಆಸ್ಪತ್ರೆ, ಪಂಚಮಿ ಟ್ರಸ್ಟ್ ಸಹಯೋಗದಲ್ಲಿ ಇಂದು ಸಂಜೆ ಪರ್ಯಾಯ ಮಠಾಧೀಶರಾದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ಇದಕ್ಕೆ ಚಾಲನೆ ನೀಡಿದರು. ಇದೇ ವೇಳೆ ನಿವೃತ್ತ ಯೋಧ ಕೃಷ್ಣ ಶೆಟ್ಟಿಬೆಟ್ಟು ಅವರಿಗೆ ಅಭಿನಂದನೆ ಕಾರ್ಯಕ್ರಮ ನಡೆಯಿತು.
Kshetra Samachara
13/08/2022 09:28 pm