ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಳ್ಳಾಲ: 75 ರ ಸ್ವಾತಂತ್ರ್ಯ ಸಂಭ್ರಮ,ಅಬ್ಬಕ್ಕಳ ನಾಡಲ್ಲಿ ರಾರಾಜಿಸಿದ 75 ಮೀಟರ್ ಉದ್ದದ ಧ್ವಜ

ಉಳ್ಳಾಲ: ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರದ ವತಿಯಿಂದ ನಡೆದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಸಂಭ್ರಮದಲ್ಲಿ 75 ಮೀಟರ್ ಉದ್ದದ ರಾಷ್ಟ್ರ ಧ್ವಜವು ಉಳ್ಳಾಲದ ಬೀದಿಗಳಲ್ಲಿ ರಾರಾಜಿಸಿತು.

ಪ್ರಥಮ ಸ್ವಾತಂತ್ರ್ಯ ಹೋರಾಟಗಾರ್ತಿ ಉಳ್ಳಾಲದ ರಾಣಿ ಅಬ್ಬಕ್ಕಳ ಪ್ರತಿಮೆಗೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಹಾರಾರ್ಪಣೆಗೈದು ನಮನ ಸಲ್ಲಿಸಿದರು.ಉಳ್ಳಾಲ ನಗರಸಭಾ ಅಧ್ಯಕ್ಷೆ ಚಿತ್ರಕಲಾ ಧ್ವಜಾರೋಹಣ ಮಾಡಿದರು.ಉಳ್ಳಾಲ ಅಬ್ಬಕ್ಕ ವೃತ್ತದಿಂದ ತೊಕ್ಕೊಟ್ಟು ಜಂಕ್ಷನ್ ವರೆಗೆ ಆಕರ್ಷಕ ತಿರಂಗ ಯಾತ್ರೆ ನಡೆಯಿತು.

ಬಿಜೆಪಿ ಮುಖಂಡ ಸಂತೋಷ್ ಕುಮಾರ್ ಬೋಳಿಯಾರ್,ಸತೀಶ್ ಕುಂಪಲ,ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು,ಚಂದ್ರಹಾಸ್ ಪಂಡಿತ್ ಹೌಸ್ ಮೊದಲಾದವರು ಉಪಸ್ಥಿತರಿದ್ದರು.

Edited By : Manjunath H D
Kshetra Samachara

Kshetra Samachara

14/08/2022 02:35 pm

Cinque Terre

3.66 K

Cinque Terre

0

ಸಂಬಂಧಿತ ಸುದ್ದಿ