ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಪು ತಾಲೂಕಿನ ವಿವಿಧೆಡೆ ಸ್ವಾತಂತ್ರ್ಯೋತ್ಸವದ ಸಂಭ್ರಮ

ಕಾಪು: ತಾಲೂಕು ಮಟ್ಟದ ರಾಷ್ಟ್ರೀಯ ಹಾಗೂ ನಾಡ ಹಬ್ಬಗಳ ಆಚರಣೆ ಸಮಿತಿಯಿಂದ ಸ್ವಾತಂತ್ರ್ಯೋತ್ಸವ ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ನಡೆಯಿತು.

ಕಾಪು ತಹಶೀಲ್ದಾರ್ ಶ್ರೀನಿವಾಸ ಮೂರ್ತಿ ಕುಲಕರ್ಣಿ ಅವರು ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು. ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಅಧ್ಯಕ್ಷತೆ ವಹಿಸಿ ಶುಭಾಶಯ ತಿಳಿಸಿದರು.

ಸಾಧಕರಾದ ನಾಟಿ ವೈದ್ಯೆ ಶಾಲಿನಿ, ಸಾಮಾಜಿಕ ಕಾರ್ಯಕರ್ತ ರವಿ ಕಟಪಾಡಿ, ನಿವೃತ್ತ ಹಿರಿಯ ಸೈನಿಕ ಜೆರೋಮ್ ಕೊಮೋಡೋರ್ ಕೆಸ್ತಲಿನೋ ಮತ್ತು ಜಾನಪದ ಕಲಾವಿದ ಗುರುಚರಣ್ ಪೊಲಿಪು ಅವರನ್ನು ಸನ್ಮಾನಿಸಲಾಯಿತು. ಕಾಪು‌ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸುಧಾಮ ಶೆಟ್ಟಿ, ತಾ.ಪ. ಕಾರ್ಯ ನಿರ್ವಹಣಾಧಿಕಾರಿ ಶಿವಪ್ರಕಾಶ್, ಪುರಸಭೆ ಮುಖ್ಯಾಧಿಕಾರಿ ವೆ‌ಂಕಟೇಶ ನಾವಡ, ಕಾಪು ವೃತ್ತ ನಿರೀಕ್ಷಕ ಕೆ. ಸಿ. ಪೂವಯ್ಯ, ಶಿಕ್ಷಣ ಸಂಯೋಜಕ ಶಂಕರ್ ಸುವರ್ಣ, ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ‌ ಪ್ರಾಂಶುಪಾಲ‌ ಡಾ. ಅನಿಲ್ ಕುಮಾರ್, ಪುರಸಭಾ ಸದಸ್ಯರು, ವಿವಿಧ ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು‌.

Edited By : Manjunath H D
Kshetra Samachara

Kshetra Samachara

15/08/2022 11:06 am

Cinque Terre

4 K

Cinque Terre

0

ಸಂಬಂಧಿತ ಸುದ್ದಿ