ಸುಳ್ಯ: ಸುಳ್ಯ ತಾಲೂಕಿನ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಆಶ್ರಯದಲ್ಲಿ 76ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಸರಕಾರಿ ಪದವಿಪೂರ್ವ ಕಾಲೇಜಿನ ಮೈದಾನದಲ್ಲಿ ನಡೆಯಿತು. ತಹಶೀಲ್ದಾರ್ ಅನಿತಾಲಕ್ಷ್ಮಿ ಎಸ್ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿ, ಸ್ವಾತಂತ್ರ್ಯದ ಸಂದೇಶ ನೀಡಿದರು. ಬಳಿಕ ಆಕರ್ಷಕ ಪಥ ಸಂಚಲನ ನಡೆಸಲಾಗಿದ್ದು, ಪೊಲೀಸ್, ಗೃಹ ರಕ್ಷಕ ದಳ, ಎನ್‌ಸಿಸಿ, ನಿವೃತ್ತ ಸೈನಿಕರ ಸಂಘ, ರೆಡ್ ಕ್ರಾಸ್, ಸ್ಕೌಟ್ಸ್ ಮತ್ತು ಗೈಡ್ಸ್, ಮತ್ತಿತರ ಘಟಕಗಳು ವಿವಿಧ ಶಾಲೆಗಳ ವಿದ್ಯಾರ್ಥಿಗಳು ಪಥ ಸಂಚಲನದಲ್ಲಿ ಭಾಗವಹಿಸಿದ್ದರು.
ನಂತರ ಸಮಾರಂಭದಲ್ಲಿ ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಅಧ್ಯಕ್ಷತೆ ವಹಿಸಿದ್ದರು. ತಹಶೀಲ್ದಾರ್ ಅನಿತಾಲಕ್ಷ್ಮಿ, ರಾಜ್ಯ ಮೀನುಗಾರಿಕೆ ನಿಗಮದ ಅಧ್ಯಕ್ಷ ಎ.ವಿ.ತೀರ್ಥರಾಮ, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಅನೇಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
Kshetra Samachara
15/08/2022 02:34 pm