ಶಿರೂರು: ಭಾರತೀಯ ಜನತಾ ಪಾರ್ಟಿ ಬಿಜೆಪಿ ಮಂಡಲ ಬೈಂದೂರು ಇದರ ವತಿಯಿಂದ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ತಿರಂಗ ಯಾತ್ರೆಯ ವಾಹನ ಜಾಥಾಕ್ಕೆ ಶಿರೂರು ಟೋಲ್ ಗೇಟ್‌ನಲ್ಲಿ ಚಾಲನೆ ನೀಡಲಾಯಿತು.
ಶಾಸಕ ಬಿ.ಎಮ್.ಸುಕುಮಾರ ಶೆಟ್ಟಿ ವಾಹನ ಜಾಥಾಕ್ಕೆ ಚಾಲನೆ ನೀಡಿ ನೀಡಿದರು. ರಾಷ್ಟ್ರಧ್ವಜಕ್ಕೆ ಜಾತಿ, ಧರ್ಮದ ಭೇದವಿಲ್ಲ, ದೇಶವಾಸಿಗಳೆಲ್ಲರೂ ದೇಶ ಭಕ್ತರಾಗಬೇಕು, ಎಲ್ಲರ ಮನದಲ್ಲೂ ತ್ರಿವರ್ಣ ಧ್ವಜದ ಬಗ್ಗೆ ಗೌರವ ಹುಟ್ಟಬೇಕು ಎನ್ನುವ ಕಾರಣಕ್ಕೆ ಹರ್ ಘರ್ ತಿರಂಗಾ ಅಭಿಯಾನ ದೇಶದೆಲ್ಲೆಡೆ ನಡೆಯುತ್ತಿದೆ. ಸ್ವಾತಂತ್ರ್ಯಕ್ಕಾಗಿ ಪ್ರಾಣ ತ್ಯಾಗ ಮಾಡಿರುವ ಲಕ್ಷಾಂತರ ಮಂದಿಯ ಆತ್ಮಗಳಿಗೆ ಗೌರವ ಸಲ್ಲಿಸಬೇಕಾಗಿದೆ. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಸೇನಾನಿಗಳಿಂದ ನಾವಿಂದು ಬದುಕುತ್ತಿದ್ದೇವೆ. 15 ಸಾವಿರ ಕಿ.ಮೀ. ದೂರದಲ್ಲಿರುವ ದೇಶದ ಗಡಿಯಲ್ಲಿ ನಮ್ಮ ಯೋಧರು ಪ್ರಾಣವನ್ನು ಪಣಕ್ಕಿಟ್ಟು ನಮ್ಮನ್ನು ಕಾಯುತ್ತಿದ್ದಾರೆ. ಅವರ ಹೋರಾಟದ ಜತೆ ನಾವೆಲ್ಲರೂ ನಿಲ್ಲಬೇಕಿದೆ ಎಂದರು.
ಈ ಸಂದರ್ಭದಲ್ಲಿ ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ತಾ.ಪಂ ಮಾಜಿ ಅಧ್ಯಕ್ಷ ಮಹೇಂದ್ರ ಪೂಜಾರಿ, ಜಿ.ಪಂ ಮಾಜಿ ಸದಸ್ಯರಾದ ಬಾಬು ಶೆಟ್ಟಿ,ಶಂಕರ ಪೂಜಾರಿ,ಸುರೇಶ್ ಬಟ್ವಾಡಿ, ರೋಹಿತ್ ಕುಮಾರ್ ಶೆಟ್ಟಿ,ತಾ.ಪಂ ಮಾಜಿ ಸದಸ್ಯರಾದ ಪುಷ್ಪರಾಜ್ ಶೆಟ್ಟಿ,ಉಮೇಶ ಕಲ್ಗದ್ದೆ,ಮಾಲಿನಿ ಕೆ, ಪಡುವರಿ ಗ್ರಾ.ಪಂ ಮಾಜಿ ಉಪಾಧ್ಯಕ್ಷ ಸದಾಶಿವ ಡಿ.ಪಡುವರಿ, ಬಿಜೆಪಿ ಜಿಲ್ಲಾ ಯುವಮೋರ್ಚ ಕಾರ್ಯದರ್ಶಿ ಶರತ್ ಕುಮಾರ್ ಶೆಟ್ಟಿ ಉಪ್ಪುಂದ, ಬೈಂದೂರು ಮಂಡಲದ ಪ್ರದಾನ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ, ಪ್ರಕಾಶ ಜಡ್ಡು,ಶಿರೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಜಗನ್ನಾಥ ಮೊಗವೀರ, ಶಿರೂರು ಆಕ್ರಮ ಸಕ್ರಮ ಸಮಿತಿ ಸದಸ್ಯ ದಿನೇಶ್ ಕುಮಾರ್ ಶಿರೂರು, ಗ್ರಾ.ಪಂ ಸದಸ್ಯರಾದ ಬಾಬು ಮೊಗೇರ, ಸುರೇಂದ್ರ ದೇವಾಡಿಗ, ರವೀಂದ್ರ ಶೆಟ್ಟಿ ಅರ್‍ಮಕ್ಕಿ ಹಾಗೂ ಬಿಜೆಪಿ ಕಾರ್ಯಕರ್ತರು ಹಾಜರಿದ್ದರು.
Kshetra Samachara
15/08/2022 04:48 pm