ಉಡುಪಿ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಇಂದು ಬೃಹತ್ ತಿರಂಗಾ ಯಾತ್ರೆ ನಡೆಯಿತು. ಜಿಲ್ಲಾ ಬಿಜೆಪಿ ಕಛೇರಿ ಬಳಿಯಿಂದ ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಬಳಿ ಇರುವ ಗಾಂಧಿ ಕಟ್ಟೆಯ ತನಕ ಬೃಹತ್ ತಿರಂಗಾ ಯಾತ್ರೆ ನಡೆಯಿತು.
ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಅಂಗಾರ ಅವರು ತಿರಂಗಾ ಯಾತ್ರೆಗೆ ಚಾಲನೆ ನೀಡಿ ಸ್ವತಃ ಯಾತ್ರೆಯಲ್ಲಿ ಪಾಲ್ಗೊಂಡರು.75 ಮೀಟರ್ ಉದ್ದದ ತಿರಂಗದೊಂದಿಗೆ ಬಿಜೆಪಿ ಕಚೇರಿಯಿಂದ ಆರಂಭಿಸಿದ ಯಾತ್ರೆ ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಬಳಿ ಇರುವ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಮುಕ್ತಾಯಗೊಂಡಿತು.
ಈ ಸಂದರ್ಭದಲ್ಲಿ ಉಡುಪಿ ಶಾಸಕ ರಘುಪತಿ ಭಟ್, ಕಾಪು ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ ಹಾಗೂ ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
15/08/2022 06:43 pm