ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ: ಕುಂದಾಪುರ ತಾಲೂಕು ಆಡಳಿತದಿಂದ ಅಮೃತ ಮಹೋತ್ಸವ

ಕುಂದಾಪುರ: ಸ್ವಾತಂತ್ರ್ಯ ನಂತರದ 75 ವರ್ಷಗಳ ಈ ಅಧ್ಯಾಯ ಮುಂದಿನ ತಲೆಮಾರುಗಳ ಮುನ್ನಡೆಗೆ, ನಿರಂತರ ಪ್ರೇರಣೆಗೆ, ಅನ್ವೇಷಣೆಗೆ ಖಚಿತ ಭರವಸೆಯತ್ತ ಸಾಗಲು ಹುರುಪು ನೀಡಲಿ ಎಂದು ಕುಂದಾಪುರ ಉಪವಿಭಾಗಾಧಿಕಾರಿ ರಾಜು ಹೇಳಿದರು.

ಕುಂದಾಪುರ ತಾಲೂಕು ಆಡಳಿತ ಗಾಂಧಿ ಮೈದಾನದಲ್ಲಿ ಹಮ್ಮಿಕೊಂಡ 75ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಧ್ವಜಾರೋಹಣಗೈದು, ಗೌರವ ರಕ್ಷೆ ಸ್ವೀಕರಿಸಿ ಮಾತನಾಡಿದರು.

ಈ ಸಂದರ್ಭ ಪುರಸಭೆಯ ಅಧ್ಯಕ್ಷೆ ವೀಣಾ ಭಾಸ್ಕರ್, ಉಪಾಧ್ಯಕ್ಷ ಸಂದೀಪ್ ಖಾರ್ವಿ, ಡಿವೈಎಸ್ಪಿ ಶ್ರೀಕಾಂತ್ ಇದ್ದರು. ಪೊಲೀಸ್ ಇಲಾಖೆಯಿಂದ ಎಸೈ ಸದಾಶಿವ ಗವರೋಜಿ ನೇತೃತ್ವದಲ್ಲಿ ಗೌರವ ವಂದನೆ ನಡೆಯಿತು. ವಿವಿಧ ಶಾಲೆಗಳ ವಿದ್ಯಾರ್ಥಿಗಳು ಪಥ ಸಂಚಲನ ನಡೆಸಿದರು. ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Edited By : Nagesh Gaonkar
Kshetra Samachara

Kshetra Samachara

15/08/2022 07:05 pm

Cinque Terre

11.4 K

Cinque Terre

0

ಸಂಬಂಧಿತ ಸುದ್ದಿ