ಸುಳ್ಯ: ವಿಶ್ವ ಹಿಂದೂ ಪರಿಷದ್ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿ ಸುಳ್ಯ ಪ್ರಖಂಡದ ವತಿಯಿಂದ ವಿಶ್ವ ಹಿಂದೂ ಪರಿಷದ್‌ನ ಸ್ಥಾಪನಾ ದಿನಾಚರಣೆಯ ಅಂಗವಾಗಿ 9ನೇ ವರ್ಷದ ‘ಸುಳ್ಯ ಮೊಸರು ಕುಡಿಕೆ ಉತ್ಸವ’ ಮತ್ತು ಶೋಭಾಯಾತ್ರೆ ಆ.29 ರಂದು ಸುಳ್ಯದಲ್ಲಿ ನಡೆಯಲಿದೆ ಎಂದು ಮೊಸರು ಕುಡಿಕೆ ಉತ್ಸವ ಸಮಿತಿಯ ಅಧ್ಯಕ್ಷ ಹರೀಶ್ ಉಬರಡ್ಕ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಸುಳ್ಯ ಚೆನ್ನಕೇಶವ ದೇವಸ್ಥಾನದ ಬಳಿಯಿಂದ ಮಧ್ಯಾಹ್ನ 1 ಗಂಟೆಗೆ ಮೊಸರು ಕುಡಿಕೆ ಉತ್ಸವದ ಶೋಭಾಯಾತ್ರೆ ಆರಂಭಗೊಳ್ಳಲಿದೆ.ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ ಉದ್ಘಾಟಿಸುವರು. ಬಳಿಕ ವಿವಿಧ ಸ್ಥಳಗಳಲ್ಲಿ ಸ್ಥಾಪಿಸಿದ ಅಟ್ಟಿ ಮಡಿಕೆಗಳನ್ನು ಯುವಕರು ಒಡೆಯಲಿದ್ದಾರೆ. ಶೋಭಾಯಾತ್ರೆ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ಸಮಾಪನಗೊಳ್ಳಲಿದ್ದು ಸಂಜೆ 6 ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಬೆಂಗಳೂರಿನ ಬಾಲ ವಾಗ್ಮಿ ಹಾರಿಕಾ ಮಂಜುನಾಥ್ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಮೊಸರು ಕುಡಿಕೆ ಉತ್ಸವ ಸಮಿತಿ ಅಧ್ಯಕ್ಷ ಹರೀಶ್ ಉಬರಡ್ಕ ಅಧ್ಯಕ್ಷತೆ ವಹಿಸುವರು.ಪದ್ಮಶ್ರೀ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ ಅವರನ್ನು ಸನ್ಮಾನಿಸಲಾಗುವುದು. ವಿಶ್ವ ಹಿಂದೂ ಪರಿಷದ್ ಮಂಗಳೂರು ವಿಭಾಗ ಕಾರ್ಯದರ್ಶಿ ದೇವಿಪ್ರಸಾದ್ ಶೆಟ್ಟಿ, ಬಜರಂಗದಳ ದಕ್ಷಿಣ ಪ್ರಾಂತ ಸಂಯೋಜಕ ಸುನಿಲ್ ಕೆ.ಆರ್,ಐಡಿಯಲ್ ಆಟೋ ವರ್ಕ್ಸ್‌ನ ಮಾಲಕ ಭಾಸ್ಕರ ಗೌಡ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಅವರು ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ವಿಶ್ವ ಹಿಂದೂ ಪರಿಷದ್ ಅಧ್ಯಕ್ಷ ಸೋಮಶೇಖರ ಪೈಕ, ಮೊಸರು ಕುಡಿಕೆ ಉತ್ಸವ ಸಮಿತಿಯ ಕಾರ್ಯದರ್ಶಿ ಪ್ರಕಾಶ್ ಯಾದವ್, ಸಹ ಕಾರ್ಯದರ್ಶಿ ಭಾನುಪ್ರಕಾಶ್ ಪೆರುಮುಂಡ ,ಕೋಶಾಧಿಕಾರಿ ಪಿ.ರಂಜಿತ್ ಕುಮಾರ್ ಉಪಸ್ಥಿತರಿದ್ದರು.
Kshetra Samachara
16/08/2022 04:46 pm