ಕಾಪು: ಯುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ಯುವ ವಾಹಿನಿ ಪ್ರತಿವರ್ಷ ನಡೆಸುತ್ತಾ ಬಂದಿರುವ ಅಂತರ್ ಘಟಕ ಸಾಂಸ್ಕೃತಿಕ ಕಾರ್ಯಕ್ರಮ "ಡೆನ್ನಾನ... ಡೆನ್ನಾನ" ಆಗಸ್ಟ್ 21ರಂದು ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಸಪ್ತಗಿರಿ ಸಭಾಗೃಹದಲ್ಲಿ ನಡೆಯಲಿದೆ ಎಂದು ಯುವವಾಹಿನಿ ಉಡುಪಿ ಘಟಕ ಅಧ್ಯಕ್ಷ ಉದಯ್ ಕುಮಾರ್ ಮಟ್ಟು ತಿಳಿಸಿದರು.
ಕಾಪು ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಉಡುಪಿ ಯುವ ವಾಹಿನಿ ಘಟಕದ ಆತಿಥ್ಯ ದಲ್ಲಿ (ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ) ದಿನಪೂರ್ತಿ ನಡೆಯುವ ಕಾರ್ಯಕ್ರಮದಲ್ಲಿ ಬೆಂಗಳೂರು ಸೇರಿದಂತೆ ಅಂತರ್ ಜಿಲ್ಲೆಯಲ್ಲಿ 33 ಘಟಕಗಳು ಹೊಂದಿರುವ ಎಲ್ಲಾ ಸದಸ್ಯರ ಪ್ರತಿಭೆ ಅನಾವರಣ ಗೊಳ್ಳಲಿದೆ ಎಂದರು.
ವಿಜೇತ ತಂಡಗಳಿಗೆ ಪ್ರಶಸ್ತಿ ಫಲಕದ ಜತೆಗೆ ಪ್ರಥಮ, ದ್ವಿತೀಯ, ತೃತೀಯ ಕ್ರಮವಾಗಿ 25,000,15,000,10000 ರೂ. ಹಾಗೂ ವೈಯಕ್ತಿಕವಾಗಿ ಶ್ರೇಷ್ಠ ನಿರ್ವಹಣೆ ನೀಡಿದ 4 ಸ್ಪರ್ಧಿಗಳಿಗೆ ಮತ್ತು ಇಬ್ಬರು ಬಾಲ ಪ್ರತಿಭೆಗಳಿಗೆ ವಿಶೇಷ ಬಹುಮಾನ ನೀಡಲಾಗುತ್ತದೆ.
ಕಾರ್ಯಕ್ರಮವನ್ನು ಇಂಧನ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್, ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಅಧ್ಯಕ್ಷ ಬಿ.ಎನ್. ಶಂಕರ ಪೂಜಾರಿ, ಬಿಲ್ಲವ ಮಹಾ ಮಂಡಲ ಅಧ್ಯಕ್ಷ ರಾಜಶೇಖರ ಕೋಟ್ಯಾನ್, ಲೀಲಾಕ್ಷ ಕರ್ಕೇರ, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಪೂರ್ಣಿಮಾ ಭಾಗವಹಿಸಲಿರುವರು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರವೀಣ್ ಡಿ.ಪೂಜಾರಿ, ಸಂತೋಷ ಪೂಜಾರಿ, ಅಶೋಕ್ ಕೋಟ್ಯಾನ್, ಮಹಾಬಲ ಅಮೀನ್, ದಯಾನಂದ ಕರ್ಕೇರ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
18/08/2022 03:14 pm