ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ದೇವರಾಜ ಅರಸು ಪ್ರಶಸ್ತಿಗೆ ರಾಷ್ಟ್ರಪ್ರಶಸ್ತಿ ವಿಜೇತ ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರ ಆಯ್ಕೆ

ಉಡುಪಿ : ಜಿಲ್ಲಾ ಮಟ್ಟದ ಪ್ರಥಮ ಡಿ. ದೇವರಾಜ ಅರಸು ಪ್ರಶಸ್ತಿಗೆ ರಾಷ್ಟ್ರಪ್ರಶಸ್ತಿ ವಿಜೇತ ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರ ಆಯ್ಕೆಯಾಗಿದ್ದಾರೆ. ಇವರಿಗೆ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಡಿ.ದೇವರಾಜ ಅರಸು ಅವರ 107ನೇ ಜನ್ಮ ದಿನಾಚರಣೆ ಕಾರ್ಯಕ್ರಮ ದಲ್ಲಿ 50,000ರೂ. ನಗದು ಹಾಗೂ ಫಲಕದೊಂದಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಶೈಕ್ಷಣಿಕ, ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ, ಚಲನಚಿತ್ರ, ಸಾಹಿತ್ಯ, ಯಕ್ಷಗಾನ ಹೀಗೆ ಹಲವು ಕ್ಷೇತ್ರಗಳಲ್ಲಿ ದುಡಿದಿರುವ 88ರ ಹರೆಯದ ಮಲ್ಪೆ ರಾಘವೇಂದ್ರ, 40 ವರ್ಷ ಶಿಕ್ಷಕರಾಗಿ ದುಡಿದಿದ್ದು, ಕಾಜಾರಗುತ್ತು ಶಾಲಾ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ 1992ರಲ್ಲಿ ನಿವೃತ್ತರಾಗಿದ್ದರು.

1985ರಲ್ಲಿ ಜಿಲಾ ಮಟ್ಟದ ಶ್ರೇಷ್ಠ ಶಿಕ್ಷಕ, 1986ರಲ್ಲಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಪಡೆದ ರಾಘವೇಂದ್ರ, 1987ರಲ್ಲಿ ರಾಷ್ಟ್ರಪತಿ ಆರ್. ವೆಂಕಟರಾಮನ್‌ರಿಂದ ರಾಷ್ಟ್ರಪ್ರಶಸ್ತಿಯನ್ನು ಸ್ವೀಕರಿಸಿದ್ದರು. ಅದೇ ವರ್ಷ ರಾಷ್ಟ್ರೀಯ ಬಾಲಶಿಕ್ಷಾ ಪುರಸ್ಕಾರವನ್ನು ಸಹ ಅವರು ಪಡೆದಿದ್ದರು.

Edited By : PublicNext Desk
Kshetra Samachara

Kshetra Samachara

20/08/2022 02:18 pm

Cinque Terre

1.95 K

Cinque Terre

0

ಸಂಬಂಧಿತ ಸುದ್ದಿ