ಉಡುಪಿ: ಉಡುಪಿ ಜಿಲ್ಲೆ ರಚನೆಗೊಂಡು 25 ವರ್ಷಗಳು ತುಂಬುತ್ತಿರುವ ಹಿನ್ನೆಲೆಯಲ್ಲಿ ಆ.25 ರಂದು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಸಂಬಂಧ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ ಮತ್ತು ಶಾಸಕ ರಘುಪತಿ ಭಟ್ ರಜತೋತ್ಸವ ಲೋಗೋ ಹಾಗೂ ವೆಬ್ಸೈಟ್ ಬಿಡುಗಡೆ ಮಾಡಿದರು.
ಆ.25ರಿಂದ ಜ.25ರವರೆಗೂ ನಿರಂತರವಾಗಿ ಕಾರ್ಯಕ್ರಮಗಳನ್ನು ಆಯೋಜಿಸಲು ರಜತೋತ್ಸವ ಸಮಿತಿಗಳನ್ನು ರಚಿಸಲಾಗಿದೆ.
ಆ.25ರಂದು ಮಧ್ಯಾಹ್ನ 3ಕ್ಕೆ ಬೋರ್ಡ್ ಹೈಸ್ಕೂಲ್ನಿಂದ ರಜತೋತ್ಸವ ಮೆರವಣಿಗೆಗೆ ಚಾಲನೆ ನೀಡಲಾಗುವುದು. 5 ಸಾವಿರ ವಿದ್ಯಾರ್ಥಿಗಳು, 2 ಸಾವಿರ ಸ್ವಸಹಾಯ ಸಂಘಗಳ ಸದಸ್ಯರು, ನಾಗರಿಕರು ಭಾಗವಹಿಸಲಿದ್ದಾರೆ. ಪಂಚಾಯಿತಿಯಿಂದ ಕನಿಷ್ಠ 50 ಮಂದಿ ಮಾಜಿ ಹಾಗೂ ಹಾಲಿ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಬರಲು ಬಸ್ಗಳ ವ್ಯವಸ್ಥೆ ಮಾಡಲಾಗಿದೆ. ಪುರಸಭೆ, ನಗರಸಭೆ, ಪಟ್ಟಣ ಪಂಚಾಯಿತಿಗಳಿಂದಲೂ ಜನಪ್ರತಿನಿಧಿಗಳುಭಾಗವಹಿಸಲಿದ್ದಾರೆ. ರಾಜ್ಯಪಾಲ ಥಾವರ್ ಚಂದ್ರ ಗೆಹ್ಲೋಟ್ ತಜತೋತ್ಸವ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. 1997ರ ಅವಧಿಯಲ್ಲಿ ಜಿಲ್ಲೆಯಲ್ಲಿ ಶಾಸಕರಾಗಿದ್ದವರನ್ನು ಅತಿಥಿಗಳಾಗಿ ಆಹ್ವಾನಿಸಲಾಗುತ್ತಿದೆ. 15,000 ಮಂದಿ ಉತ್ಸವದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.
Kshetra Samachara
24/08/2022 07:49 pm