ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಉಡುಪಿಗೆ ಆಗಮಿಸಿದ ರಾಜ್ಯಪಾಲರು; ಶ್ರೀಕೃಷ್ಣ ಮಠಕ್ಕೆ ಭೇಟಿ

ಉಡುಪಿ: ಉಡುಪಿ ಜಿಲ್ಲಾ ರಜತೋತ್ಸವದ ಉದ್ಘಾಟನೆಗಾಗಿ ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಉಡುಪಿಗೆ ಆಗಮಿಸಿದ್ದಾರೆ. ಉಡುಪಿಗೆ ಆಗಮಿಸಿದ ಅವರನ್ನು ಶಾಸಕ ರಘುಪತಿ ಭಟ್ ಮತ್ತಿತರರು ಸ್ವಾಗತಿಸಿದರು. ಬಳಿಕ ರಾಜ್ಯಪಾಲರು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣನ ದರ್ಶನ ಪಡೆದು ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಶ್ರೀ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರಿಂದ ಮಂತ್ರಾಕ್ಷತೆ ಪಡೆದರು.

ಈ ಸಂದರ್ಭದಲ್ಲಿ ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ, ಮೀನುಗಾರಿಕಾ ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಅಂಗಾರ, ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ ಸುನಿಲ್ ಕುಮಾರ್ ಜೊತೆಗಿದ್ದರು.

Edited By : PublicNext Desk
Kshetra Samachara

Kshetra Samachara

25/08/2022 01:49 pm

Cinque Terre

2.07 K

Cinque Terre

0

ಸಂಬಂಧಿತ ಸುದ್ದಿ