ಸುಳ್ಯ: ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶುಕ್ರವಾರ ಸರಳ ಸಾಮೂಹಿಕ ವಿವಾಹ ನಡೆಯಿತು.ಶ್ರೀ ದೇವಳದ ಆದಿ ಸುಬ್ರಹ್ಮಣ್ಯ ಕಲ್ಯಾಣ ಮಂಟಪದಲ್ಲಿ ನಡೆದ ವಿವಾಹದಲ್ಲಿ ಒಟ್ಟು ನಾಲ್ಕು ಜೋಡಿಗಳು ಹಸೆಮಣೆ ಏರಿದವು.
ಕುಕ್ಕೆ ದೇವಳದಲ್ಲಿ ಜನ ಸಾಮಾನ್ಯರ ಅನುಕೂಲಕ್ಕಾಗಿ ಸಪ್ತಪದಿ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಬೆಳಗ್ಗೆ 9.00 ರಿಂದ 9.50ರ ವರೆಗೆ ನೆರವೇರುವ ಕನ್ಯಾ ಲಗ್ನ ಸುಮೂಹುರ್ತದಲ್ಲಿ ನೂತನ ಜೋಡಿಗಳು ಸತಿ ಪತಿಗಳಾದರು.
ಸರಳ ಸಾಮೂಹಿಕ ವಿವಾಹವಾಗುವ ವರನಿಗೆ ಶ್ರೀ ದೇವಳದಿಂದ ಪ್ರೋತ್ಸಾಹ ಧನವಾಗಿ ರೂ.5 ಸಾವಿರ ಹಾಗೂ ವಧುವಿಗೆ ರೂ.10 ಸಾವಿರ, ಸುಮಾರು ರೂ 40 ಸಾವಿರ ಮೌಲ್ಯದಲ್ಲಿ ವಧುವಿಗೆ ಚಿನ್ನದ ತಾಳಿ, ಎರಡು ಚಿನ್ನದ ಗುಂಡನ್ನು ದೇವಾಲಯದಿಂದ ನೀಡಲಾಯಿತು.
ವಿವಾಹಕ್ಕೆ ಆಗಮಿಸುವ ವಧು-ವರರು ಮತ್ತು ಅವರ ಬಂಧುಗಳಿಗೆ ಹಾಗೂ ಸಾರ್ವಜನಿಕರಿಗೆ ಊಟೋಪಚಾರ ಹಾಗೂ ಆವಶ್ಯಕ ವ್ಯವಸ್ಥೆಗಳನ್ನು ದೇವಳದಿಂದ ವ್ಯವಸ್ಥೆ ಮಾಡಲಾಯಿತು. ಈ ಸಂದರ್ಭ ಶ್ರೀ ದೇವಳದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ದೇವಳದ ಅಧೀಕ್ಷಕ ಪದ್ಮನಾಭ ಶೆಟ್ಟಿಗಾರ್, ಶಿಷ್ಠಾಚಾರ ಅಧಿಕಾರಿ ಜಯರಾಮ ರಾವ್,
ಶ್ರೀ ದೇವಳದ ಶಿವಸುಬ್ರಹ್ಮಣ್ಯ ಭಟ್, ನಾಗೇಶ್ ಎ.ವಿ, ನವೀನ್, ಮಹೇಶ್, ಮಹಾಬಲೇಶ್ವರ ದೋಳ, ಮೋಹನ್ ಎಂ.ಕೆ, ರಾಜಲಕ್ಷ್ಮಿ ಶೆಟ್ಟಿಗಾರ್, ಯೋಗೀಶ್ ಎಂ ವಿಟ್ಲ, ಎನ್ ಸಿ ಸುಬ್ಬಪ್ಪ, ಅಶೋಕ್ ಅತ್ಯಡ್ಕ ಸೇರಿದಂತೆ ಭಕ್ತರು, ದೇವಳದ ಸಿಬ್ಬಂದಿಗಳು ಉಪಸ್ಥಿತರಿದ್ದರು.
Kshetra Samachara
25/08/2022 10:53 pm