ಮಲ್ಪೆ: ಕೇಂದ್ರ ಸರಕಾರದ ಭೂವಿಜ್ಞಾನ ಸಚಿವಾಲಯ, ಬೆಂಗಳೂರಿನ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರ ಮಂಗಳೂರು ಹಾಗೂ ಮಂಗಳೂರು ವಿವಿ ಇವುಗಳ ಸಹಯೋಗದಲ್ಲಿ ಉಡುಪಿಯ ಪೂರ್ಣಪ್ರಜ್ಞ ಕಾಲೇಜು ಆ.27ರ ಶನಿವಾರ ಮಲ್ಪೆಯ ಸಮುದ್ರ ತೀರದಲ್ಲಿ ಬೆಳಗ್ಗೆ 8ರಿಂದ 'ಸ್ವಚ್ಛ ಸಾಗರ ಸುರಕ್ಷಿತ ಸಮುದ್ರ' ಅಭಿಯಾನವನ್ನು ಹಮ್ಮಿಕೊಂಡಿದೆ.
ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್‌ಪಾಲ್ ಸುವರ್ಣ, ಪೂರ್ಣಪ್ರಜ್ಞ ಕಾಲೇಜು ಆಡಳಿತ ಮಂಡಳಿಯ ಕಾರ್ಯದರ್ಶಿ ಡಾ.ಜಿ.ಎಸ್. ಚಂದ್ರಶೇಖರ್ ಇವರು ಭಾಗವಹಿಸಲಿದ್ದಾರೆ.
ಅಭಿಯಾನದಲ್ಲಿ ಪೂರ್ಣಪ್ರಜ್ಞ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ. ರಾಘವೇಂದ್ರ ಎ. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kshetra Samachara
26/08/2022 08:58 pm