ಮುಲ್ಕಿ: ದಕ್ಷಿಣ ಕನ್ನಡ ಜಿಲ್ಲಾ ಪದ್ಮಶಾಲಿ ಮಹಾಸಭಾ ಅಮೃತ ಮಹೋತ್ಸವ ಸಮಿತಿ ಹಾಗೂ ಪದ್ಮಶಾಲಿ ಮಹಾಸಭಾ (ರಿ) ವತಿಯಿಂದ ದಕ್ಷಿಣ ಕನ್ನಡ ಉಡುಪಿ ಹಾಗೂ ಕಾಸರಗೋಡು ಜಿಲ್ಲೆ ವ್ಯಾಪ್ತಿಯ ಸಮಾಜ ಬಾಂಧವರ ಅಮೃತ ಸಂಭ್ರಮ 2022 ಕಾರ್ಯಕ್ರಮ ವಿವಿಧ ಕಾರ್ಯಕ್ರಮಗಳೊಂದಿಗೆ ಸಮಾಪನಗೊಂಡಿತು.
ಸಮಾರೋಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ದ.ಕಜಿಲ್ಲಾ ಪದ್ಮಶಾಲಿ ಮಹಾಸಭಾ (ರಿ)ನ ಅಮೃತ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಅಂಬಾತನಯ ಮುದ್ರಾಡಿ ಮಾತನಾಡಿ ಸಮಾಜ ಬಾಂಧವರು ಒಗ್ಗಟ್ಟಾಗಬೇಕು ಎಂದರು
ಬ್ರಹ್ಮಶ್ರೀ ಶಿಬರೂರು ವೇದವ್ಯಾಸ ತಂತ್ರಿಗಳು ಆಶೀರ್ವಚನ ನೀಡಿದರು.
ಸಭೆಯಲ್ಲಿ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಡಿ ಕಾಮತ್, ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು,ಪುನರೂರು ದೇವಸ್ಥಾನದ ಆಡಳಿತ ಮೊಕ್ತೇಸರ ಪಟೇಲ್ ವಾಸುದೇವ ರಾವ್, ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಪುರಂದರ ಡಿ ಶೆಟ್ಟಿಗಾರ್ ಮತ್ತಿತರರು ಉಪಸ್ಥಿತರಿದ್ದರು.ಪ್ರಜ್ವಲ್ ಎ ಸಿದ್ದಕಟ್ಟೆ ನಿರೂಪಿಸಿದರು. ಕಾರ್ಯಕ್ರಮದಲ್ಲಿ ದಾನಿಗಳಿಗೆ ಗೌರವಾರ್ಥಣೆ ಸಾಂಸ್ಕೃತಿಕ ಸ್ಪರ್ಧೆಗಳ ಬಹುಮಾನ ವಿತರಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
Kshetra Samachara
29/08/2022 09:39 am