ಮುಲ್ಕಿ: ಇತಿಹಾಸ ಪ್ರಸಿದ್ಧ ಮೂಲ್ಕಿ ಸೀಮೆಯ ಬೆಳ್ಳಾಯರು ಶ್ರೀ ಚಂದ್ರ ಮೌಳೀಶ್ವರ ದೇವಸ್ಥಾನದ ಬ್ರಹ್ಮಕಲಕೋತ್ಸವ ಮುಂದಿನ ಜನವರಿ 29ರಿಂದ ಫೆಬ್ರವರಿ 3ರವರೆಗೆ ನಡೆಯಲಿದ್ದು ಭಕ್ತರ ಹಾಗೂ ದಾನಿಗಳ ಸಹಕಾರಬೇಕು ಎಂದು ಸಮಿತಿಯ ಅಧ್ಯಕ್ಷ ದೇವಸ್ಥಾನದ ಆಡಳಿತ ಮೊಕ್ತೇಸರ ಪಾದೆ ಮನೆ ಜಯಂತ ರೈ ಹೇಳಿದರು.
ಅವರು ದೇವಸ್ಥಾನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ ದೇವಸ್ಥಾನದ ಜೀರ್ಣೋದ್ಧಾರ ಪ್ರಕ್ರಿಯೆಗಳು ನಡೆಯಲಿದ್ದು ಪೂರ್ವಭಾವಿಯಾಗಿ ಮುಂದಿನ ಸೆ.10.11.12ರಂದು ಪ್ರಾಯಶ್ಚಿತ್ತ ಹೋಮ ಹಾಗೂ ಧಾರ್ಮಿಕ ವಿಧಿವಿಧಾನಗಳು ಹಾಗೂ ಸೇ.30 ರಂದು ಅನುಜ್ಞಾ ಕಲಶ ನಡೆಯಲಿದೆ ಎಂದರು.
ಬಳಿಕ ಸಭೆಯಲ್ಲಿ ಬ್ರಹ್ಮಕಲಶೋತ್ಸವದ ಸಮಿತಿಯ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ನೂತನ ಬ್ರಹ್ಮಕಲಚೋತ್ಸವ ಸಮಿತಿಯ ಅಧ್ಯಕ್ಷರಾಗಿ ಪಾದೆಮನೆ ಜಯಂತ ರೈ ಹಾಗೂ ಸಮಿತಿಯ ಗೌರವಾಧ್ಯಕ್ಷರುಗಳಾಗಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಅಭಯ ಚಂದ್ರ ಜೈನ್ ಅವರನ್ನು ನೇಮಕ ಮಾಡಲಾಯಿತು. ಉಳಿದಂತೆ ಸಮಿತಿಯ ವಿವಿಧ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮೊಕ್ತೇಸರ ಹರಿದಾಸ್ ಭಟ್, ಅನುವಂಶಿಕ ಮಕ್ತೇಸರ ಶೇಖರ ಟಿ ಶೆಟ್ಟಿ, ಕಿರಣ್ ಶೆಟ್ಟಿ ಕೋಲ್ನಾಡು ಗುತ್ತು, ಉದ್ಯಮಿ ಚೇತನ್ ಶೆಟ್ಟಿ, ಕೋಶಾಧಿಕಾರಿ ಕೃಷ್ಣ ಭಟ್, ಪ್ರವೀಣ್ ಶೆಟ್ಟಿ, ಮಹೇಶ್ ಹೆಗ್ಡೆ, ವಿದ್ಯಾಧರ ಶೆಟ್ಟಿ ಕೋಲ್ನಾಡು, ವಿಜಯ ಶೆಟ್ಟಿ ಕೋಲ್ನಾಡು, ವಿನೋದ್ ಸಾಲ್ಯಾನ್ ಬೆಳ್ಳಾಯರು, ಅನಂತರಾಮ ಭಟ್ ಮತ್ತಿತರರು ಉಪಸ್ಥಿತರಿದ್ದರು.
ವಿಜಯ ಶೆಟ್ಟಿ ಕೋಲ್ನಾಡು ನಿರೂಪಿಸಿದರು
Kshetra Samachara
29/08/2022 09:43 am