ಉಡುಪಿ : ಅಜ್ಜರಕಾಡು ಜಿ.ಶಂಕರ ಸರಕಾರಿ ಮಹಿಳಾ ಕಾಲೇಜಿನ ಎಂ.ಎ.ಇತಿಹಾಸ ವಿಭಾಗದ ವಿದ್ಯಾರ್ಥಿನಿಯರು ರಚಿಸಿದ 'ಉಡುಪಿ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರು' ಎಂಬ ಕೃತಿಯನ್ನು ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್ ಬಿಡುಗಡೆಗೊಳಿಸಿದರು.
ಬಳಿಕ ಮಾತನಾಡಿದ ಅವರು ಸ್ವಾತಂತ್ರ್ಯ ಅಮೃತ ಮಹೋತ್ಸವ ಮತ್ತು ಉಡುಪಿ ರಜತ ಮಹೋತ್ಸವದ ಈ ಸಮಯದಲ್ಲಿ ವಿದ್ಯಾರ್ಥಿನಿಯರೇ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಒಂದು ಪುಸ್ತಕವನ್ನು ಪ್ರಕಟಿಸಿರುವುದು ಅಭಿನಂದನೀಯ. ಹಾಗೆಯೇ ಮುಂದೆ ಕೂಡ ಉಡುಪಿ ಜಿಲ್ಲೆಯ ವಿವಿಧ ಕೊಡುಗೆಗಳ ಬಗ್ಗೆ ವಿದ್ಯಾರ್ಥಿನಿಯರಿಂದ ಕೃತಿಗಳು ಹೊರಬರಲಿ ಎಂದು ಹಾರೈಸಿದರು.
ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ ಶೆಟ್ಟಿ ಎಸ್. ಅಧ್ಯಕ್ಷತೆ ವಹಿಸಿದ್ದರು. ಇತಿಹಾಸ ಎಂ.ಎ. ವಿಭಾಗದ ಪ್ರಾದ್ಯಾಪಕ ಡಾ.ರಾಮದಾಸ ಪ್ರಭು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೇಶವ ಮೂರ್ತಿ ಎಂ. ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
Kshetra Samachara
30/08/2022 01:50 pm