ಮುಲ್ಕಿ: ಇಲ್ಲಿಗೆ ಸಮೀಪದ ಕುಬೆವೂರು ಜಾರಂದಾಯ ಸೇವಾ ಮಿತ್ರ ಮಂಡಳಿ ಹಾಗೂ ಮಹಿಳಾ ಮಂಡಳಿ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಕುಬೆವೂರು ಜಾರಂದಾಯ ದೈವಸ್ಥಾನದಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ಪೈರ್ ಅಧ್ಯಕ್ಷ ವೆಂಕಟೇಶ್ ಹೆಬ್ಬಾರ್ ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ಎಳೆ ಪ್ರತಿಭೆಗಳನ್ನು ಗುರುತಿಸಿ ಗೌರವಿಸುವ ಸಂಘಟನೆಗಳ ಕಾರ್ಯ ಶ್ಲಾಘನೀಯವಾಗಿದ್ದು, ವಿದ್ಯಾರ್ಥಿಗಳು ಸಾಧಕರಾಗಿ ರಾಷ್ಟ್ರಕ್ಕೆ ಮಾದರಿಯಾಗಬೇಕು ಎಂದರು.
ವೇದಿಕೆಯಲ್ಲಿ ಪಂಚಾಯತ್ ಸದಸ್ಯರಾದ ವಿಕಾಸ್ ಶೆಟ್ಟಿ, ವೇದಾವತಿ ಜಯಕುಮಾರ್, ದೈವಸ್ಥಾನದ ಜೀರ್ಣೋದ್ಧಾರ ಸಮಿತಿಯ ಕೋಶಾಧಿಕಾರಿ ಶ್ರೀಕಾಂತ್ ಶೆಟ್ಟಿ, ಮಿತ್ರ ಮಂಡಳಿ ಅಧ್ಯಕ್ಷ ಪ್ರಕಾಶ್ ಶೆಟ್ಟಿ, ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ,ಮಹಿಳಾ ಮಂಡಳಿ ಅಧ್ಯಕ್ಷೆ ಶೋಭಾ ಶೆಟ್ಟಿ, ಜಯಕುಮಾರ್ ಕುಬೆವೂರು ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಅತ್ಯಧಿಕ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು ಹಾಗೂ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ನಡೆದ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
Kshetra Samachara
02/09/2022 07:59 pm