ಮುಲ್ಕಿ: ಹಳೆಯಂಗಡಿ ಸಮೀಪದ ಪಾವಂಜೆ ಶ್ರೀ ಮಹಾಲಿಂಗೇಶ್ವರ ಮಹಾ ಗಣಪತಿ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಕ್ಷೇತ್ರಕ್ಕೆ ನೂತನ ದ್ವಜಸ್ತಂಭ ದಾನಿಗಳಿಂದ ಸಮರ್ಪಣೆ ಕಾರ್ಯಕ್ರಮ ನಡೆಯಿತು.
ಮುಲ್ಕಿಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅರ್ಚಕ ಶ್ರೀಪತಿ ಉಪಾಧ್ಯಾಯ ಹಾಗೂ ವಿದ್ವಾಂಸ ಪಾವಂಜೆ ಕೃಷ್ಣ ಭಟ್ ನೇತೃತ್ವದಲ್ಲಿ ಧ್ವಜಸ್ತಂಬಕ್ಕೆ ವಿಶೇಷ ಪೂಜೆ ನೆರವೇರಿಸಿ ಶ್ರೀ ಪಾವಂಜೆ ಶ್ರೀ ಮಹಾಲಿಂಗೇಶ್ವರ ಮಹಾ ಗಣಪತಿ ದೇವಸ್ಥಾನಕ್ಕೆ ವಿವಿಧ ಚೆಂಡೆ ವಾದ್ಯಹಾಗೂ ಧ್ವಜ ಸ್ತಂಭದ ಭವ್ಯ ಮೆರವಣಿಗೆಗೆ ಚಾಲನೆ ನೀಡಲಾಯಿತು.
ಈ ಸಂದರ್ಭ ಮುಲ್ಕಿ ಸೀಮೆ ಅರಸರಾದ ದುಗ್ಗಣ್ಣ ಸಾವಂತರು, ಬಪನಾಡು ಕ್ಷೇತ್ರದ ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ, ಪಾವಂಜೆ ಶ್ರೀ ಮಹಾಲಿಂಗೇಶ್ವರ ಮಹಾ ಗಣಪತಿ ದೇವಸ್ಥಾನದ ಅರ್ಚಕರಾದ ವಾಸುದೇವ ಭಟ್, ಗಣೇಶ್ ಭಟ್, ಮಾಜೀ ಸಚಿವ ಅಭಯ ಚಂದ್ರ ಜೈನ್, ನಾಗರಾಜ ಶೆಟ್ಟಿ, ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರು, ಹರಿದಾಸ್ ಭಟ್ ತೋಕೂರು,ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಸೂರ್ಯ ಕುಮಾರ್, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು,ಎಸ್ಕೆಪಿಎ ನ ಮೋಹನ್ ರಾವ್ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
04/09/2022 04:29 pm