ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಕೋಟಿ- ಚೆನ್ನಯ ಸೇನಾ ಪೂರ್ವ ತರಬೇತಿ ಸಂಸ್ಥೆ ಉದ್ಘಾಟನೆ

ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಉಡುಪಿಯಲ್ಲಿ ಇಂದು ಕೋಟಿ-ಚೆನ್ನಯ ಸೇನಾ ಪೂರ್ವ ತರಬೇತಿ ಸಂಸ್ಥೆ ಉದ್ಘಾಟನೆಗೊಂಡಿತು.

ಉಡುಪಿಯ ಹೋಟೆಲ್ ಕಿದಿಯೂರಿನ ಸೇಷಶಯನ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ತರಬೇತಿ ಸಂಸ್ಥೆಯಲ್ಲಿ ನೂರು ಜನ ಯುವಕರನ್ನು ಆಯ್ಕೆ ಮಾಡಿಕೊಂಡು ಸೇನಾಪೂರ್ವ ತರಬೇತಿಯನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನೀಡಲಿದ್ದು, ಮುಂದಿನ ಅಗ್ನಿಪಥಕ್ಕೆ ಅರ್ಜಿ ಆಹ್ವಾನಿಸಿದಾಗ ಈ ನಾಲ್ಕು ತಿಂಗಳ ತರಬೇತಿ ಹೊಂದಿದ ಯುವಕರು ಬಹುತೇಕ ಮಂದಿ ಆಯ್ಕೆಯಾಗುವಂತಹ ಅವಕಾಶಗಳನ್ನು ಕಲ್ಪಿಸಲಾಗಿದೆ.

ಏನಿದರ ವಿಶೇಷತೆ?

ಕೋಟಿ ಚೆನ್ನಯ ಸೇನಾ ಆಯ್ಕೆ ಪೂರ್ವ ತರಬೇತಿ ಸಂಸ್ಥೆಯಲ್ಲಿ ಕಲಿಯುತ್ತಿರುವ ಅಭ್ಯರ್ಥಿಗಳಿಗೆ ಊಟ, ವಸತಿ ಮತ್ತು ಹಾಸ್ಟೆಲ್ ಸೌಲಭ್ಯಗಳನ್ನು ಒದಗಿಸಲಾಗುತ್ತಿದ್ದು, ಎಲ್ಲಾ ಸಿದ್ಧತೆಗಳು ನಡೆದು ಪ್ರಥಮ ಹಂತದಲ್ಲಿ 60 ಜನ ಈಗಾಗಲೇ ಆಯ್ಕೆಯಾಗಿದ್ದಾರೆ. ಎರಡನೇ ಹಂತದಲ್ಲಿ ಎಲ್ಲಾ 100 ಅಭ್ಯರ್ಥಿಗಳು ಆಯ್ಕೆಯಾಗುವ ಅವಕಾಶಗಳು ಹೆಚ್ಚಿವೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ಕಡಲತಡಿಯ ಮೂರು ಜಿಲ್ಲೆಗಳಲ್ಲಿ ಆರಂಭಿಕ ಹಂತದಲ್ಲಿ ಸೇನಾ ಆಯ್ಕೆ ಪೂರ್ವ ತರಬೇತಿ ಸಂಸ್ಥೆ ಆರಂಭವಾಗುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ 31 ಜಿಲ್ಲೆಗಳಲ್ಲೂ ಇದನ್ನು ವಿಸ್ತರಿಸಲಾಗುತ್ತಿದೆ.

Edited By : Nagesh Gaonkar
Kshetra Samachara

Kshetra Samachara

05/09/2022 06:54 pm

Cinque Terre

9.48 K

Cinque Terre

0

ಸಂಬಂಧಿತ ಸುದ್ದಿ