ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಮೊದಲ ಹಂತದಲ್ಲಿ ಆರಂಭಿಸಲಾಗುತ್ತಿರುವ ಸೇನಾ ಆಯ್ಕೆ ಪೂರ್ವ ತರಬೇತಿ ಸಂಸ್ಥೆಯನ್ನು ಮುಂದಿನ ದಿನಗಳಲ್ಲಿ ರಾಜ್ಯದ 31 ಜಿಲ್ಲೆಗಳಿಗೂ ವಿಸ್ತರಿಸುವ ಯೋಜನೆ ಹಾಕಿಕೊಳ್ಳಲಾಗಿದೆ. ಇದೇ ರೀತಿ ಇಲಾಖೆಯಿಂದ ಮಹಿಳೆಯರಿಗೂ ತರಬೇತಿ ಸಂಸ್ಥೆ ಪ್ರಾರಂಭಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ರಾಜ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದವರ್ಗ ಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಸೋಮವಾರ ಉಡುಪಿ ಕಿದಿಯೂರು ಹೊಟೇಲಿನ ಶೇಷಶಯನ ಹಾಲ್‌ನಲ್ಲಿ ಆಯೋಜಿಸಲಾದ ಉಡುಪಿಯ ಕೋಟಿ ಚೆನ್ನಯ್ಯ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆಯ ಉದ್ಘಾಟನಾ ಸಮಾರಂಭ ದಲ್ಲಿ ಅವರು ಮಾತನಾಡುತಿದ್ದರು.
ಅಗ್ನಿಪಥಕ್ಕೆ ಪೂರಕವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀರರಾಣಿ ಅಬ್ಬಕ್ಕ, ಉಡುಪಿ ಜಿಲ್ಲೆಯಲ್ಲಿ ಕೋಟಿ-ಚೆನ್ನಯ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಂಜ ನಾಯ್ಕ ಹೆಸರಿನಲ್ಲಿ ಸೇನಾ ಆಯ್ಕೆ ಪೂರ್ವ ತರಬೇತಿ ಸಂಸ್ಥೆಗಳನ್ನು ಆರಂಭಿಸ ಲಾಗುತ್ತಿದೆ. ಇದೇ ರೀತಿ ಪ್ರತಿ ಒಂದೊಂದು ಜಿಲ್ಲೆಯಲ್ಲಿ ದೇಶಕ್ಕಾಗಿ ಸಮರ್ಪಣಾ ಮನೋಭಾವದಿಂದ ದುಡಿದ ಐತಿಹಾಸಿಕ ವೀರ ಪುರುಷರ ಹೆಸರಿನಲ್ಲಿ ಸಂಸ್ಥೆ ಯನ್ನು ಆರಂಭಿಸಲಾಗುವುದು ಎಂದರು.
Kshetra Samachara
05/09/2022 08:05 pm