ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಪೋರ್ಚುಗೀಸರ ವಿರುದ್ಧ ರಾಣಿ ಅಬ್ಬಕ್ಕಳ ಹೋರಾಟ ಅವಿಸ್ಮರಣೀಯ

ಮುಲ್ಕಿ: ಮಂಗಳೂರು ವಿಶ್ವವಿದ್ಯಾನಿಲಯ ರಾಣಿ ಅಬ್ಬಕ್ಕ ಅಧ್ಯಯನ ಪೀಠ ಮಂಗಳಗಂಗೋತ್ರಿ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು, ಮುಲ್ಕಿ ಸಹಯೋಗದೊಂದಿಗೆ ಸ್ವಾತಂತ್ರ್ಯ ಅಮೃತವರ್ಷ ವಿಶೇಷ ಉಪನ್ಯಾಸ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ವಾಸುದೇವ ಬೆಳ್ಳೆ ವಹಿಸಿದ್ದರು.ಉಳ್ಳಾಲ ರಾಣಿ ಅಬ್ಬಕ್ಕ ಉತ್ಸವ ಸಮಿತಿಯ ಅಧ್ಯಕ್ಷರಾದ ದಿನಕರ ಉಳ್ಳಾಲ್ ರವರು "ಕರಿ ಮೆಣಸಿನ ರಾಣಿ ಅಬ್ಬಕ್ಕ" ಬಗ್ಗೆ ವಿಶೇಷ ಉಪನ್ಯಾಸ ನೀಡಿ ಪೋರ್ಚುಗೀಸರ ವಿರುದ್ಧ ರಾಣಿ ಅಬ್ಬಕ್ಕಳ ಹೋರಾಟ ಅವಿಸ್ಮರಣೀಯವಾಗಿದ್ದು ಉತ್ತಮ ದೇಶಾಭಿಮಾನಿಯಾಗಿದ್ದ ಅವರು ಧೈರ್ಯ, ಸಮಾನತೆ ಹಾಗೂ ಸಾಹಸಿಯಾಗಿದ್ದರು ಎಂದರು.

ಮುಖ್ಯ ಅತಿಥಿಗಳಾಗಿ ಮುಲ್ಕಿ ನಪಂ ಸದಸ್ಯ ಪುತ್ತು ಬಾವ, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಪ್ರೌಢಶಾಲಾ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಹರ್ಷರಾಜ ಶೆಟ್ಟಿ, ಹಿರಿಯ ಸಹ ಮುಖ್ಯ ಶಿಕ್ಷಕಿ ಜಯಲಕ್ಷ್ಮಿಟಿ ನಾಯಕ, ರಾಣಿ ಅಬ್ಬಕ್ಕ ಅಧ್ಯಯನ ಪೀಠದ ಸಂಯೋಜಕ ಡಾ. ಗಣೇಶ್ ಅಮೀನ್ ಸಂಕಮಾರ್ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸರಕಾರದಿಂದ ಗೌರವ ಡಾಕ್ಟರೇಟ್ ಪ್ರಶಸ್ತಿ ಪಡೆದ ಕ.ಸಾ.ಪ.ಮಾಜೀ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು ರವರನ್ನು ಗೌರವಿಸಲಾಯಿತು ಹಾಗೂ ರಾಣಿ ಅಬ್ಬಕ್ಕ ಬಗ್ಗೆ ರಸಪ್ರಶ್ನೆಯಲ್ಲಿ ಭಾಗವಹಿಸಿ ಬಹುಮಾನ ಪಡೆದ ಪ್ರಥಮ ಪಿಯುಸಿ ವಿದ್ಯಾರ್ಥಿ ಪ್ರಜ್ವಲ್ ರನ್ನು ಅಭಿನಂದಿಸಲಾಯಿತು. ಉಪನ್ಯಾಸಕಿ ಡಾ.ರೇಖಾ ಬಿ ಎಸ್. ನಿರೂಪಿಸಿದರು.

Edited By : PublicNext Desk
Kshetra Samachara

Kshetra Samachara

07/09/2022 04:50 pm

Cinque Terre

1.97 K

Cinque Terre

0