ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: 'ಮಕ್ಕಳ ಬೆಳವಣಿಗೆಗೆ ಪೋಷಕರ, ಶಿಕ್ಷಕರ ಸಹಕಾರ ಮುಖ್ಯ'

ಮುಲ್ಕಿ: ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ಪಿರ್ ಹಾಗೂ ಸಮುದಾಯ ಆರೋಗ್ಯ ಕೇಂದ್ರದ ಸಹಯೋಗ ದೊಂದಿಗೆ ಕಾರ್ನಾಡ್ ಅಂಗನವಾಡಿ ಕೇಂದ್ರದಲ್ಲಿ ಶಿಶು ಪೋಷನ ಅಭಿಯಾನ ಹಾಗೂ ಅಂಗನವಾಡಿ ಮಕ್ಕಳ ಹೆತ್ತವರಿಗೆ ಮಾಹಿತಿ ಶಿಬಿರ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ಪ್ ರ್ ನ ಸ್ಥಾಪಕ ಅಧ್ಯಕ್ಷ ವೆಂಕಟೇಶ್ ಹೆಬ್ಬಾರ್ ವಹಿಸಿ ಮಾತನಾಡಿ, ಮಕ್ಕಳ ಬೆಳವಣಿಗೆಗೆ ಪೋಷಕರ ಹಾಗೂ ಶಿಕ್ಷಕರ ಸಹಕಾರ ಮುಖ್ಯವಾಗಿದೆ ಎಂದರು.

ಮುಲ್ಕಿ ಸಮುದಾಯ ಆರೋಗ್ಯ ಕೇಂದ್ರದ ಆಪ್ತಸಮಾಲೋಚನಾಧಿಕಾರಿ ಶಿವಪ್ರಸಾದ್ , ಆರೋಗ್ಯ ಶುಶ್ರೂಕಿಯರಾದ ಅನಿತಾ, ಸಂಧ್ಯಾ ರವರು ಪೋಷಕಾಂಶಗಳ ಬಗ್ಗೆ ಹಾಗೂ ಪೌಷ್ಠಿಕ ಆಹಾರದ ಬಗ್ಗೆ ಮಾಹಿತಿಯನ್ನು ನೀಡಿ ಪೋಷಕರ ಪ್ರಶ್ನೆಗಳಿಗೆ ಉತ್ತರಿಸಿದರು.

ಲಯನ್ಸ್ ಕ್ಲಬ್ ಸದಸ್ಯರುಗಳಾದ ಪ್ರತಿಭಾಹೆಬ್ಬಾರ್, ಸುಧೀರ್ ಬಾಳಿಗಾ, ರೋಷನ್ ಸಲ್ದಾನ ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

07/09/2022 05:07 pm

Cinque Terre

1.99 K

Cinque Terre

0

ಸಂಬಂಧಿತ ಸುದ್ದಿ