ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ: ಸೆ.18ರಿಂದ ನಾಗೂರಿನಲ್ಲಿ ತಾಳಮದ್ದಳೆ ಸಪ್ತಾಹ: ಗೃಹ ಸಚಿವರಿಂದ ಉದ್ಘಾಟನೆ

ಕುಂದಾಪುರ: ನಾಗೂರಿನ ಗೋಪಾಲಕೃಷ್ಣ ಕಲಾಮಂದಿರದ ಕೋಟ ವೈಕುಂಠ ನಾಯಕ್ ಸ್ಮರಣ ವೇದಿಕೆಯಲ್ಲಿ ಧಾರೇಶ್ವರ ಯಕ್ಷಬಳಗ ಚಾರಿಟೆಬಲ್ ಟ್ರಸ್ಟ್ ಕಿರಿಮಂಜೇಶ್ವರ ವತಿಯಿಂದ ಸೆ.18ರಿಂದ ಸೆ.24ರವರೆಗೆ ಯಕ್ಷಗಾನ ತಾಳಮದ್ದಳೆ ಸಪ್ತಾಹ ನಡೆಯಲಿದೆ ಎಂದು ಧಾರೇಶ್ವರ ಯಕ್ಷಬಳಗ ಚಾರಿಟೆಬಲ್ ಟ್ರಸ್ಟ್‌ನ ಅಧ್ಯಕ್ಷ, ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಅವರು ತಿಳಿಸಿದ್ದಾರೆ.

ತಾಳಮದ್ದಲೆ ಸಪ್ತಾಹವನ್ನು ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಉದ್ಘಾಟಿಸಲಿದ್ದಾರೆ. ನಾಗೂರು ದಯಾನಂದ ಬಳಗಾರ್ ಅವರಿಗೆ ತೆಕ್ಕಟ್ಟೆ ಆನಂದ ಮಾಸ್ಟರ್ ಕಲಾತಪಸ್ವಿ ಪ್ರಶಸ್ತಿ ಪ್ರದಾನ ನಡೆಯಲಿದೆ.

ಉದ್ಘಾಟನಾ ಕಾರ್ಯಕ್ರಮಕ್ಕೆ ಹಿಂದುಳಿದ ವರ್ಗಗಳ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ, ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಸಹಕಾರಿ ಯೂನಿಯನ್ ಅಧ್ಯಕ್ಷ ಎಸ್. ಜಯಕರ ಶೆಟ್ಟಿ ಇಂದ್ರಾಳಿ, ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್‌ಚಂದ್ರ ಶೆಟ್ಟಿ, ಉದ್ಯಮಿ ಉಮೇಶ್ ಕೋಟ ವೈಕುಂಠ ಆಗಮಿಸಲಿದ್ದಾರೆ.

ಪ್ರತಿದಿನ ಸಂಜೆ 5 ಗಂಟೆಗೆ ತಾಳಮದ್ದಳೆ ನಡೆಯಲಿದ್ದು, ತೆಂಕು ಹಾಗೂ ಬಡಗಿನ ಖ್ಯಾತ ಕಲಾವಿದರಿಂದ ನಚಿಕೇತ, ವಾಮನ, ಭಾರ್ಗವರಾಮ, ಮಹಾಪ್ರಸ್ಥಾನ, ದೇವಯಾನಿ, ಕೃಷ್ಣಸಂಧಾನ, ವಿಭೀಷಣ ನೀತಿ ಪ್ರಸಂಗಗಳನ್ನು ಆಯ್ದುಕೊಳ್ಳಲಾಗಿದ್ದು, ಸೆ.24ರ ಸಮಾರೋಪ ಸಮಾರಂಭದಲ್ಲಿ ಜನಪದ ಪರಿಷತ್ತು ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ, ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿ, ಉದ್ಯಮಿ ಸದಾನಂದ ಪ್ರಭು ರಾಯಚೂರು, ಕಸಾಪ ಮಾಜಿ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಜನಾರ್ದನ ಹಂದೆ ಭಾಗವಹಿಸಲಿದ್ದಾರೆ ಎಂದು ಸುಬ್ರಹ್ಮಣ್ಯ ಧಾರೇಶ್ವರ ತಿಳಿಸಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

09/09/2022 12:15 pm

Cinque Terre

4.53 K

Cinque Terre

0

ಸಂಬಂಧಿತ ಸುದ್ದಿ