ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಕುಂಜಿಬೆಟ್ಟು ಗಾಯತ್ರಿ ಕಲ್ಯಾಣ ಮಂಟಪದಲ್ಲಿ "ವಿಶ್ವಕರ್ಮ ಜಯಂತಿ ಆಚರಣೆ" ನಡೆಯಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶಾಸಕರಾದ ಕೆ. ರಘುಪತಿ ಭಟ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಉಡುಪಿ ಜಿಲ್ಲಾಧ್ಯಕ್ಷರಾದ ನೆರಂಬಳ್ಳಿ ರಮೇಶ್ ಆಚಾರ್ಯ, ವಿಶ್ವಕರ್ಮ ಒಕ್ಕೂಟದ ಪ್ರಧಾನ ಕಾರ್ಯದರ್ಶಿಗಳಾದ ಕೆ. ಮುರಳೀಧರ, ಅಪರ ಜಿಲ್ಲಾಧಿಕಾರಿಗಳಾದ ವೀಣಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಪೂರ್ಣಿಮಾ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
Kshetra Samachara
17/09/2022 12:38 pm