ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ:ಸ್ವಚ್ಛತೆ ಮೂಲಕ ಗ್ರಾಮ ಗ್ರಾಮದಲ್ಲಿ ಅಭಿವೃದ್ಧಿಗೆ ಎಲ್ಲರೂ ಪಣತೊಡಬೇಕು: ಉಮಾನಾಥ್

ಮುಲ್ಕಿ: ಮುಲ್ಕಿ ನಗರ ಪಂಚಾಯತ್ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ವಿಜಯ ಕಾಲೇಜು ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಸಹಭಾಗಿತ್ವದಲ್ಲಿ ಸ್ವಚ್ಛತಾ ಶ್ರಮಧಾನ ಕಾರ್ಯಕ್ರಮ ನಗರ ಪಂಚಾಯತ್ ವ್ಯಾಪ್ತಿಯ ಜೈನ ಬಸದಿ ಬಳಿ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ ಸ್ವಚ್ಛತೆ ಮೂಲಕ ಗ್ರಾಮ ಗ್ರಾಮದಲ್ಲಿ ಅಭಿವೃದ್ಧಿಗೆ ಎಲ್ಲರೂ ಪಣತೊಡಬೇಕು ಎಂದರು.

ಮುಲ್ಕಿ ನಗರ ಪಂಚಾಯತ್ ಮುಖ್ಯಾಧಿಕಾರಿ ಚಂದ್ರ ಪೂಜಾರಿ ಮಾತನಾಡಿ ನಗರದಲ್ಲಿ ಸ್ವಯಂ ಪ್ರೇರಣೆಯಿಂದ ನಾಗರಿಕರು ತ್ಯಾಜ್ಯ ವಿಂಗಡಣೆಯ ಬಗ್ಗೆ ಹಾಗೂ ಪ್ಲಾಸ್ಟಿಕ್ ಬಳಸದೆ ಇರುವ ಬಗ್ಗೆ ತಿಳುವಳಿಕೆ ನೀಡಿ ಮುಂದಿನ ಪೀಳಿಗೆಗೆ ಸ್ವಚ್ಛ ಹಾಗೂ ಮಾಲಿನ್ಯ ಮುಕ್ತ ಪರಿಸರವನ್ನು ನೀಡಲು ಪ್ರಯತ್ನಿಸಬೇಕು ಎಂದರು.ಬಳಿಕ ಪ್ರತಿಜ್ಞಾವಿಧಿ ಬೋಧನೆ ಹಾಗೂ ಶ್ರಮಧಾನ ನಡೆಯಿತು.

ಶ್ರಮಧಾನದಲ್ಲಿ ವಿವಿಧ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

18/09/2022 03:11 pm

Cinque Terre

2.17 K

Cinque Terre

0

ಸಂಬಂಧಿತ ಸುದ್ದಿ