ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುರತ್ಕಲ್: ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಬ್ರಾಹ್ಮಣ ಸಂಘಟನೆಯನ್ನು ಬಲಪಡಿಸಿ

ಸುರತ್ಕಲ್ : ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಬ್ರಾಹ್ಮಣ ಸಂಘಟನೆಯನ್ನು ಬಲಪಡಿಸಿ ಬ್ರಾಹ್ಮಣ್ಯದ ಉಳಿವಿನತ್ತ ಐಕ್ಯತೆಯೊಂದಿಗೆ ಶ್ರಮಿಸೋಣ ಎಂದು ಆಖಿಲ ಕರ್ನಾಟಕ ಬ್ರಾಹ್ಮಣ ಮಹಾ ಸಭಾದ ಅಧ್ಯಕ್ಷ ಆಶೋಕ ಹರ್ನಹಳ್ಳಿ ನುಡಿದರು.

ಆವರು ಕುಳಾಯಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ಕೂಟ ಮಹಾಜಗತ್ತು ಸಾಲಿಗ್ರಾಮ(ರಿ) ಕೇಂದ್ರ ಸಂಸ್ಥೆ ಮತ್ತು ಕಾಟಿಪಳ್ಳ ಕೃಷ್ಣಾಪುರ ಅಂಗ ಸಂಸ್ಥೆಯ ಸಹಭಾಗಿತ್ವದಲ್ಲಿ ಕೇಂದ್ರೀಯ ಮಹಾಧಿವೇಶನ ಮತ್ತು 69 ನೇ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಮಾತನಾಡಿದರು.

ಕೇಂದ್ರ ಅಂಗಸಂಸ್ಥೆಯ ಅಧ್ಯಕ್ಷ ಎಚ್ ಸತೀಶ್ ಹಂದೆ ಅಧ್ಯಕ್ಷತೆ ವಹಿಸಿ ಮಾತನಾಡಿ ಮುಂದಿನ ದಿನಗಳಲ್ಲಿ ಕೂಟ ಮಹಾಜಗತ್ತು ಐಕ್ಯ ಮನೋಭಾವದಿಂದ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದರು.

ವೇ.ಮೂ ಕೋಡಿಮಜಲು ಅನಂತ ಪದ್ಮನಾಭ ಉಪಾಧ್ಯಾಯ ದೀಪ ಪ್ರಜ್ವಲನೆಗೈದರು. ಸಾಲಿಗ್ರಾಮ ಶ್ರೀಗುರುನರಸಿಂಹ ದೇವಸ್ಥಾನದ ಅಡಳಿತ ಮಂಡಳಿ ಅಧ್ಯಕ್ಷ ಕೆ.ಎಸ್. ಕಾರಂತ, ಸದಸ್ಯ ಪಿ. ಸದಾಶಿವ ಐತಾಳ್, ಕರ್ಣಾಟಕ ಬ್ಯಾಂಕ್‍ನ ಆಡಳಿತ ನಿರ್ದೇಶಕ ಮಹಾಬಲೇಶ್ವರ ಎಂ. ಎಸ್, ಮಾಜಿ ಅಧ್ಯಕ್ಷ ಜಯರಾಮ್ ಭಟ್, ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಮ್ ಪಿ ಶ್ರೀನಾಥ್,

ಕುಳಾಯಿ ಶ್ರೀವಿಷ್ಣುಮೂರ್ತಿ ದೇವಸ್ಥಾನದ ಅನುವಂಶಿಕ ಅಡಳಿತ ಮೊಕ್ತೇಸರ ಕೃಷ್ಣ ಹೆಬ್ಬಾರ್, ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅನುವಂಶಿಕ ಅಡಳಿತ ಮೊಕ್ತೇಸರ ಐ ರಮಾನಂದ ಭಟ್ ರ ಸಾಧಕರ ನೆಲೆಯಲ್ಲಿ ಸನ್ಮಾನಿಸಲಾಯಿತು.

Edited By : PublicNext Desk
Kshetra Samachara

Kshetra Samachara

18/09/2022 09:33 pm

Cinque Terre

3.66 K

Cinque Terre

0

ಸಂಬಂಧಿತ ಸುದ್ದಿ