ಮುಲ್ಕಿ: ಪಕ್ಷಿಕೆರೆ ಶ್ರೀ ವಿನಾಯಕ ಮಿತ್ರ ಮಂಡಳಿ(ರಿ) ನೇತೃತ್ವದಲ್ಲಿ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು, ಆಶ್ರಯದಲ್ಲಿ ಮಾರುತಿ ನಗರದಲ್ಲಿ ಮತ್ತು ಸೈಂಟ್ ಜೂಡ್ ಶಾಲೆ ಪಕ್ಷಿಕೆರೆ ಹೋಗುವ ರಸ್ತೆ ಬದಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ಈ ಕಾರ್ಯದಲ್ಲಿ ಕೆಮ್ರಾಲ್ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೀಲಾ ಕೃಷ್ಣಪ್ಪ , ಮಂಡಳಿಯ ಗೌರವಾಧ್ಯಕ್ಷ ಧನಂಜಯ ಪಿ ಶೆಟ್ಟಿಗಾರ್, ಅಧ್ಯಕ್ಷ ಚಂದ್ರಹಾಸ್, ಕಾರ್ಯದರ್ಶಿ ಪ್ರವೀಣ್ ಹಾಗೂ ಮಂಡಳಿಯ ಸದಸ್ಯರು ಭಾಗವಹಿಸಿದರು.
Kshetra Samachara
18/09/2022 09:41 pm