ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ಜರುಗಲಿರುವ ಮಂಗಳೂರು ದಸರಾ ಮಹೋತ್ಸವದ ಉದ್ಘಾಟನೆಗೆ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಆಹ್ವಾನ ನೀಡಲಾಗುತ್ತದೆ ಎಂದು ಮಾಜಿ ಕೇಂದ್ರ ಸಚಿವ, ಕುದ್ರೋಳಿ ಶ್ರೀಕ್ಷೇತ್ರದ ಅಭಿವೃದ್ಧಿ ರೂವಾರಿ ಬಿ.ಜನಾರ್ದನ ಪೂಜಾರಿ ಹೇಳಿದರು.
ದಸರಾ ಮಹೋತ್ಸವದ ಅಂಗವಾಗಿ ಶ್ರೀಕ್ಷೇತ್ರದಲ್ಲಿ ನಡೆದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಶ್ರೀಕ್ಷೇತ್ರ ಕುದ್ರೋಳಿಯಲ್ಲಿ ಸೆ.26 ರಿಂದ ಅ.6 ರವರೆಗೆ ದಸರಾ ಮಹೋತ್ಸವ ನಡೆಯಲಿದೆ. ಸಿಎಂ ಅವರ ಸಮಯವನ್ನು ನೋಡಿ ದಸರಾ ಮಹೋತ್ಸವದ ಉದ್ಘಾಟನೆಗೆ ದಿನಾಂಕ, ಸಮಯವನ್ನು ನಿಗಧಿಪಡಿಸಲಾಗುತ್ತದೆ ಎಂದು ಹೇಳಿದರು.
ಆಮಂತ್ರಣ ಪತ್ರಿಕೆಯನ್ನು ಸಿಎಂ ಅವರಿಗೆ ಕಳುಹಿಸಿ ದಸರಾ ಉದ್ಘಾಟನೆಗೆ ಆಗಮಿಸುವಂತೆ ನಾನೇ ಆಹ್ವಾನ ನೀಡುತ್ತೇನೆ. ದಸರಾ ಉದ್ಘಾಟನೆಗೆ ಸಿಎಂ ಅವರು ಬಂದರೂ ನಾವು ಸಂತೋಷ ಪಡುತ್ತೇವೆ. ಈ ಬಾರಿ ದಸರಾ ಮಹೋತ್ಸವವನ್ನು ಅದ್ಧೂರಿಯಾಗಿ ನಡೆಯಲಿದೆ ಎಂದು ಬಿ.ಜನಾರ್ದನ ಪೂಜಾರಿ ಹೇಳಿದರು.
Kshetra Samachara
19/09/2022 11:55 am