ಮಂಗಳೂರು: ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಮಂಗಳೂರು ತಾಲೂಕು ವ್ಯಾಪ್ತಿಗೆ ಅನ್ವಯವಾಗುವಂತೆ ಸೆ.28 ರಿಂದ ಅಕ್ಟೋಬರ್ 1ರವರೆಗೆ ಹೆಚ್ಚುವರಿ 4 ದಿನಗಳ ರಜೆಯನ್ನು ಘೋಷಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರು ಆದೇಶಿಸಿದ್ದಾರೆ.
ಈಗಾಗಲೇ ರಾಜ್ಯದ ಎಲ್ಲಾ ಶಾಲೆಗಳಿಗೆ ಶೈಕ್ಷಣಿಕ ಮಾರ್ಗಸೂಚಿಯಂತೆ ಅಕ್ಟೋಬರ್ 3 - 16ರವರೆಗೆ ರಜೆ ಘೋಷಿಸಲಾಗಿತ್ತು. ಆದರೆ ಸೆ.26 ರಿಂದ ಆರಂಭಗೊಳ್ಳುವ ಮಂಗಳೂರು ದಸರಾ ಹಬ್ಬಕ್ಕೆ ಪೂರಕವಾಗುವಂತೆ ಸೆ.26 ರಿಂದಲೇ ರಜೆ ನೀಡುವಂತೆ ಪೋಷಕರು, ಜನಪ್ರತಿನಿಧಿಗಳು ಸರಕಾರಕ್ಕೆ ಮನವಿ ಮಾಡಿದ್ದರು. ಈ ಮನವಿಗೆ ಶಿಕ್ಷಣ ಸಚಿವರು ಪೂರಕವಾಗಿ ಸ್ಪಂದಿಸಿದ್ದು, ಇದೀಗ ರಾಜ್ಯ ಸರಕಾರ ಪರಿಷ್ಕೃತ ಆದೇಶವನ್ನು ಹೊರಡಿಸಿದೆ.
ಆದ್ದರಿಂದ ಮಂಗಳೂರು ತಾಲೂಕು ವ್ಯಾಪ್ತಿಯ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಸೆ.28ರಿಂದ ಅಕ್ಟೋಬರ್ 1 ರವರೆಗೆ ಹೆಚ್ಚುವರಿ ರಜೆಗಳನ್ನು ಘೋಷಿಸಿದೆ. ಅಕ್ಟೋಬರ್ 2ರ ರವಿವಾರ ಕಡ್ಡಾಯವಾಗಿ ಗಾಂಧಿ ಜಯಂತಿ ಕಾರ್ಯಕ್ರಮವನ್ನು ಆಯೋಜಿಸುವಂತೆ ಕಡ್ಡಾಯವಾಗಿ ಸೂಚಿಸಿದೆ. ವಿದ್ಯಾರ್ಥಿಗಳಿಗೆ ನೀಡಲಾಗಿರುವ ಈ ನಾಲ್ಕು ಹೆಚ್ಚುವರಿ ರಜೆಗಳನ್ನು ನವೆಂಬರ್ ತಿಂಗಳಿನ ನಾಲ್ಕು ಶನಿವಾರ ಪೂರ್ಣ ದಿನದ ತರಗತಿ ಮತ್ತು ಎರಡು ರವಿವಾರ ಪೂರ್ಣ ಶಾಲಾ ಕೆಲಸದ ದಿನಗಳಾಗಿ ನಡೆಸಿ ರಜೆಯನ್ನು ಸರಿದೂಗಿಸುವಂತೆ ಆದೇಶದಲ್ಲಿ ತಿಳಿಸಿದ್ದಾರೆ.
Kshetra Samachara
23/09/2022 10:39 pm