ಮುಲ್ಕಿ: ಪಕ್ಷಿಕೆರೆ ಶ್ರೀ ವಿನಾಯಕ ಮಿತ್ರ ಮಂಡಳಿ ನೇತೃತ್ವದಲ್ಲಿ, ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ , ನೆಹರೂ ಯುವ ಕೇಂದ್ರ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಪಂಡಿತ್ ದೀನದಯಾಳ ಉಪಾಧ್ಯಾಯರ" ಜನ್ಮ ದಿನಚರಣೆಯನ್ನು ಆಚರಿಸಲಾಯಿತು
ಕಾರ್ಯಕ್ರಮದ ಅಧ್ಯಕ್ಷತೆಯನ್ನು ದ.ಕ ಜಿ. ಪಂ ಮಾಜಿ ಸದಸ್ಯ ವಿನೋದ್ ಕುಮಾರ್ ಬೊಳ್ಳೂರು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಕೆಮ್ರಾಲ್ ಗ್ರಾಪಂ ಅಧ್ಯಕ್ಷೆ ಲೀಲಾ ಕೃಷ್ಣಪ್ಪ ಮಾತನಾಡಿ ಹಿರಿಯರ ಆದರ್ಶಗಳನ್ನು ಪಾಲಿಸಿ ನುಡಿದಂತೆ ನಡೆಯಬೇಕು ಎಂದರು. ಪಕ್ಷಿಕೆರೆ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಗಣಪತಿ ಆಚಾರ್ಯ, ಜಯರಾಮ ಆಚಾರ್ಯ,ಕೆಮ್ರಾಲ್ ನಾಗರಿಕ ಸೇವಾ ಕೇಂದ್ರದ ಮುಖ್ಯಸ್ಥ ಲಕ್ಷ್ಮಿನಾರಾಯಣ, ಮಂಡಳಿಯ ಗೌರವಾಧ್ಯಕ್ಷ ಧನಂಜಯ್ ಪಿ ಶೆಟ್ಟಿಗಾರ್, ಮಂಡಳಿಯ ಅಧ್ಯಕ್ಷ ಚಂದ್ರಹಾಸ , ಕಾರ್ಯದರ್ಶಿ ಪ್ರವೀಣ್, ಊರ ಗಣ್ಯರು ಹಾಗೂ ಮಂಡಳಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು. ಸುಮಂತ್ ಕಾರ್ಯಕ್ರಮ ನಿರೂಪಿಸಿದರು.
Kshetra Samachara
25/09/2022 08:31 pm