ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ನಮ್ಮ ಭೂಮಿಯ ರಾಮಾಂಜಿಗೆ ಮಹಾತ್ಮಗಾಂಧಿ ಶಾಂತಿ ಪ್ರತಿಷ್ಠಾನದ ವರ್ಷದ ವ್ಯಕ್ತಿ ಪುರಸ್ಕಾರ

ಉಡುಪಿ: ಮಂಗಳೂರಿನ ಮಹಾತ್ಮಗಾಂಧಿ ಶಾಂತಿ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ `ವರ್ಷದ ವ್ಯಕ್ತಿ ಗೌರವ -2022 ' ಪ್ರಶಸ್ತಿಗೆ ನಮ್ಮಭೂಮಿಯ ರಾಮಾಂಜಿ ಆಯ್ಕೆಯಾಗಿದ್ದಾರೆ.ಪ್ರಶಸ್ತಿಯನ್ನು ಅ.2 ರಂದು ಸಂಸ್ಥೆಯ ಕಾರ್ಯಾಲಯದಲ್ಲಿ ನಡೆಯುವ ಮಹಾತ್ಮಗಾಂಧಿ ದಿನಾಚರಣೆಯಲ್ಲಿ ಪ್ರದಾನ ಮಾಡಲಾಗುವುದು.

ರಾಮಾಂಜಿ ಅವರು ದುಡಿಯುವ ಮಕ್ಕಳ ಅಂತರಾಷ್ಟೀಯ ಸಂಸ್ಥೆ `ನಮ್ಮ ಭೂಮಿಯ 'ಯ ರಾಯಭಾರಿಯಾಗಿದ್ದು, ಉಡುಪಿಯ ಎಂಜಿಎಂ ಕಾಲೇಜಿನಲ್ಲಿ ಪದವಿ ಶಿಕ್ಷಣವನ್ನು, ಪತ್ರಿಕೋದ್ಯಮದಲ್ಲಿ ಪೂರೈಸಿ ಪ್ರಸ್ತುತ ಮಂಗಳೂರು ವಿಶ್ವವಿದ್ಯಾನಿಲಯದ ಎಸ್.ವಿ.ಪಿ.ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದಾರೆ. ನಾಟಕ, ಯಕ್ಷಗಾನ, ಸಂಗೀತ, ಸಾಹಿತ್ಯ, ಲಲಿತಕಲೆ ಮೊದಲಾದ ಹವ್ಯಾಸಗಳೊಂದಿಗೆ ಸಮಾಜಕ್ಕಾಗಿ ತನ್ನದೇ ಆದ ವಿಶಿಷ್ಠ ರೀತಿಯಲ್ಲಿ ಕೊಡುಗೆಯನ್ನು ನೀಡುತ್ತಿರುವ ರಾಮಾಂಜಿ ನಾಡಿನ ವಿವಿಧ ಸಂಘ ಸಂಸ್ಥೆಗಳಲ್ಲಿ ಕಳೆದ 20 ವರ್ಷಗಳಿಂದ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂದರ್ಭದಲ್ಲಿ ಹಲವಾರು ವರ್ಷ ವಿಭಿನ್ನ ವೇಷ ಧರಿಸಿ ಬಂದ 10 ಲಕ್ಷಕ್ಕೂ ಅಧಿಕ ಮೊತ್ತವನ್ನು ಬಡ ಮಕ್ಕಳ ಚಿಕಿತ್ಸೆ, ಸಂಘ ಸಂಸ್ಥೆಗಳಿಗೆ ಉದಾರವಾಗಿ ದಾನ ಮಾಡಿ ಮಾನವೀಯತೆಯನ್ನು ಮೆರೆದ ಒಬ್ಬ ಸಜ್ಜನ.

Edited By : PublicNext Desk
Kshetra Samachara

Kshetra Samachara

27/09/2022 12:09 pm

Cinque Terre

2.34 K

Cinque Terre

0

ಸಂಬಂಧಿತ ಸುದ್ದಿ