ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಗಾಂಧಿ ಜಯಂತಿಯಂದು "ಸಮಾಜದಲ್ಲಿ ದ್ವೇಷ ಅಳಿಸಿ, ಪ್ರೀತಿ ಬೆಳೆಸಿ" ಕಾರ್ಯಕ್ರಮ

ಉಡುಪಿ: ಸಮಾಜದಲ್ಲಿ ದ್ವೇಷ ಅಳಿಸಿ, ಪ್ರೀತಿ ಬೆಳೆಸುವ ನಿಟ್ಟಿನಲ್ಲಿ ಸಹಬಾಳ್ವೆ ಉಡುಪಿ ಜಿಲ್ಲೆ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ 'ಸಬ್ ಕೋ ಸನ್ಮತಿ ದೇ ಭಗವಾನ್' ಘೋಷ ವಾಕ್ಯದೊಂದಿಗೆ ಸದ್ಭಾವನಾ ದಿನಾಚರಣೆಯನ್ನು ಉಡುಪಿ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದು ಸಹಬಾಳ್ವೆ ಸಂಚಾಲನ ಸಮಿತಿಯ ಪ್ರಶಾಂತ್ ಜತ್ತನ್ನ ತಿಳಿಸಿದ್ದಾರೆ.

ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ.2ರಂದು ಬೆಳಗ್ಗೆ 10 ಗಂಟೆಗೆ ಬನ್ನಂಜೆ ನಾರಾಯಣ ಗುರು ಸಭಾಭವನ ವಠಾರದಿಂದ ಸದ್ಭಾವನಾ ಪಾದಯಾತ್ರೆ ಪ್ರಾರಂಭವಾಗಿ ಜುಮಾ ಮಸೀದಿ, ಮದರ್ ಆಫ್ ಸಾರೋಸ್ ಚರ್ಚ್ ಮೂಲಕವಾಗಿ ಸಾಗಿ ಅಜ್ಜರಕಾಡು ಗಾಂಧಿ ಉದ್ಯಾನವನದಲ್ಲಿ ಸಮಾಪ್ತಿಗೊಳ್ಳಲಿದೆ. ಬಳಿಕ ಸಾರ್ವಜನಿಕ ಸಭೆ ನಡೆಯಲಿದೆ ಎಂದರು.

Edited By : Shivu K
Kshetra Samachara

Kshetra Samachara

01/10/2022 08:18 pm

Cinque Terre

3.4 K

Cinque Terre

1

ಸಂಬಂಧಿತ ಸುದ್ದಿ