ಮುಲ್ಕಿ: ಹಿಂದೂ ಯುವ ಸೇನೆ ಮತ್ತು ಮಹಿಳಾ ಮಂಡಳಿ ಮುಲ್ಕಿ ಘಟಕದ ಆಶ್ರಯದಲ್ಲಿ 24ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವದ ಅಂಗವಾಗಿ ದಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ನಪಂ ಅಧ್ಯಕ್ಷ ಸುಭಾಷ್ ಶೆಟ್ಟಿ ವಹಿಸಿ ಮಾತನಾಡಿ ಸಂಘಟನೆಗಳ ಸಮಾಜಮುಖಿ ಕಾರ್ಯ ಶ್ಲಾಘನೀಯವಾಗಿದ್ದು ಸೇವೆ ನಿರಂತರವಾಗಿರಲಿ ಎಂದರು.
ಮುಖ್ಯ ಅತಿಥಿಗಳಾಗಿ ಮಂಗಳೂರು ಉತ್ತರಮಂಡಲದ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಭರತರಾಜ್ ಶೆಟ್ಟಿ ಕೃಷ್ಣಾಪುರ, ಬೀರುವೆರ್ ಕುಡ್ಲ ಮುಲ್ಕಿ ಘಟಕದ ಅಧ್ಯಕ್ಷ ಕಿಶೋರ್ ಸಾಲ್ಯಾನ್, ಅತಿಕಾರಿಬೆಟ್ಟು ಗ್ರಾಪಂ ಅಧ್ಯಕ್ಷ ಮನೋಹರ ಕೋಟ್ಯಾನ್, ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ಪೈರ್ ನ ಅಧ್ಯಕ್ಷ ವೆಂಕಟೇಶ ಹೆಬ್ಬಾರ್, ಯುವ ವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಉದಯ ಅಮೀನ್ ಮಟ್ಟು, ಉದ್ಯಮಿಗಳಾದ ಮೋಹನ ದಾಸ್ ಹೆಜ್ಮಾಡಿ, ವಸಂತ್ ಕೊಯ್ಯಾರ್,ಮುಲ್ಕಿ ಹಿಂದೂ ಯುವ ಸೇನೆ ಅಧ್ಯಕ್ಷ ಸುನಿಲ್ ಕುಮಾರ್ ಕಿಲ್ಪಾಡಿ,ಮಹಿಳಾ ಮಂಡಳಿ ಅಧ್ಯಕ್ಷೆ ನಿರಜಾ ಅಗರ್ ವಾಲ್ ಮತ್ತಿತರರು ಉಪಸ್ಥಿತರಿದ್ದರು. ಸಮಿತಿಯ ಶಂಕರ್ ಪಡಂಗ ಧನ್ಯವಾದ ಅರ್ಪಿಸಿದರು.
ದಿನೇಶ್ ಕೋಲ್ನಾಡು ನಿರೂಪಿಸಿದರು ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಶಾಸಕ ಉಮಾನಾಥ ಕೋಟ್ಯಾನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ರವರು ಕಾರ್ಯಕ್ರಮಕ್ಕೆ ಭೇಟಿ ನೀಡಿ ಶುಭ ಹಾರೈಸಿದರು. ಕಾರ್ಯಕ್ರಮಕ್ಕೂ ಮೊದಲು ಇತ್ತೀಚೆಗೆ ನಿಧನರಾದ ಹಿಂದೂ ಯುವ ಸೇನೆ ಮುಲ್ಕಿ ಘಟಕದ ಮಾಜಿ ಅಧ್ಯಕ್ಷ ಗೋವಿಂದ ಕೋಟ್ಯಾನ್, ಪದಾಧಿಕಾರಿಗಳಾದ ನವೀನ್ ದೇವಾಡಿಗ ಹಾಗೂ ಅಶೋಕ್ ರವರಿಗೆ ಮೌನ ಪ್ರಾರ್ಥನೆ ಮೂಲಕ ಶ್ರದ್ದಾಂಜಲಿ ಅರ್ಪಿಸಲಾಯಿತು.
Kshetra Samachara
02/10/2022 10:03 pm