ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ: ಅ.10 ರಂದು ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ

ಕೋಟ: ಕೋಟ ಶಿವರಾಮ ಕಾರಂತ ಜನೋತ್ಸವ ಕಾಠ್ಯಕ್ರಮದ ಪೂರ್ವ ಸಿದ್ಧತೆಗಳು ನಡೆಯುತ್ತಿವೆ. ಕೋಟದ ಶಾಂಭವಿ ಶಾಲೆಯ ಮೈದಾನದಲ್ಲಿ ಕಾರಂತರ ಜನ್ಮದಿನವಾದ ಅ.10ರಂದು ಕೋಟತಟ್ಟು ಗ್ರಾ.ಪಂ. ವತಿಯಿಂದ ಕಾರಂತರ ಹುಟ್ಟೂರ ಪ್ರಶಸ್ತಿ ಪ್ರದಾನ ಮಾಡಲಿದ್ದು, ಈ ಬಾರಿ ಪ್ರಶಸ್ತಿಗೆ ಕಲಾವಿದ ರಮೇಶ್ ಅರವಿಂದ್ ಆಯ್ಕೆಯಾಗಿದ್ದಾರೆ. 2,000 ಮಂದಿ ಸಾಮರ್ಥ್ಯದ ಸುಸಜ್ಜಿತ ಸಭಾ ವೇದಿಕೆ ಸಿದ್ಧತೆ ಮಾಡಲಾಗುತ್ತಿದ್ದು, ಸಭೆಯ ಅನಂತರ ಮೂಡುಬಿದರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮವಿದೆ.

10ರ ಅಪರಾಹ್ನ 3.30ಕ್ಕೆ ಕೋಟತಟ್ಟು ಗ್ರಾ.ಪಂ.ನಿಂದ ಪ್ರಶಸ್ತಿ ಪುರಸ್ಕೃತರೊಂದಿಗೆ ಸಾಂಸ್ಕೃತಿಕ ಮೆರವಣಿಗೆ ಹೊರಡಲಿದೆ.

Edited By : PublicNext Desk
Kshetra Samachara

Kshetra Samachara

07/10/2022 05:03 pm

Cinque Terre

2.17 K

Cinque Terre

0

ಸಂಬಂಧಿತ ಸುದ್ದಿ