ಮುಲ್ಕಿ: ಮುಲ್ಕಿ ವಿಜಯ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಕೋವಿಡ್-19 ವಿರುದ್ಧ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಘಟಕದ ವಿದ್ಯಾರ್ಥಿಗಳಿಗೆ ಕೋವಿಡ್ ಸುರಕ್ಷತೆಯ ಪ್ರತಿಜ್ಞಾ ವಿಧಿ ಬೋಧನಾ ಕಾರ್ಯಕ್ರಮವನ್ನು ಆನ್ಲೈನ್ ಮೂಲಕ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು.
ಕಾಲೇಜಿನ ಪ್ರಾಂಶುಪಾಲ ಡಾ. ಕೆ.ನಾರಾಯಣ ಪೂಜಾರಿ ಕೊರೊನಾ ವಿರುದ್ಧ ಹೋರಾಡಲು ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ, ಮಾಸ್ಕ್ ಧರಿಸುವಿಕೆ ಹಾಗೂ ಶುಚಿತ್ವ ಕಾಪಾಡಿಕೊಳ್ಳುವಂತೆ ಆನ್ಲೈನ್ ಮೂಲಕ ಪ್ರತಿಜ್ಞಾ ವಿಧಿ ಬೋಧಿಸಿ ವಿದ್ಯಾರ್ಥಿಗಳಲ್ಲಿ ಕೋವಿಡ್-19 ಬಗ್ಗೆ ಜಾಗೃತಿ ಸಂದೇಶ ನೀಡಿದರು.
ಸುಮಾರು 75ಕ್ಕೂ ಅಧಿಕ ವಿದ್ಯಾರ್ಥಿಗಳು ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ವಾಣಿಜ್ಯ ವಿಭಾಗ ಉಪನ್ಯಾಸಕರಾದ ಶರ್ಮಿಳಾ ರಾಜೇಶ್ ಹಾಗೂ ಅರುಣಾ ಉಪಸ್ಥಿತರಿದ್ದರು.
ಕಾರ್ಯಕ್ರಮ ಸಂಯೋಜಕರಾದ ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿ ಜಿತೇಂದ್ರ ವಿ.ರಾವ್ ಹೆಜಮಾಡಿ ನಿರೂಪಿಸಿ, ವಂದಿಸಿದರು.
Kshetra Samachara
08/10/2020 06:08 pm