ಶಿರ್ವ : ಬಂಟಕಲ್ ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾ ಲಯದಲ್ಲಿ ಹೊಸದಾಗಿ ಅಭಿವೃದ್ಧಿ ಪಡಿಸಿದ ವರ್ಚುವಲ್ ಲ್ಯಾಬ್‌ನ್ನು ಇಂದು ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನದ ಕಾರ್ಯದರ್ಶಿ ರತ್ನಕುಮಾರ್ ಉದ್ಘಾಟಿಸಿದರು.
ಗಣಕಯಂತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ರಾಘವೇಂದ್ರ ಎಸ್., ಲ್ಯಾಬ್ ಅಪ್ಲಿಕೇಶನ್ ಕಾರ್ಯದ ಬಗ್ಗೆ ವಿವರಿಸಿದರು. ಇದೇ ಸಂದರ್ಭ ದಲ್ಲಿ ಹೆಚ್ಚು ವೈಶಿಷ್ಟ್ಯಗಳೊಂದಿಗೆ ಅಭಿವೃದ್ಧಿ ಪಡಿಸಿದ ಕಾಲೇಜಿನ ವೆಬ್‌ಸೈಟ್‌ಗೆ ಚಾಲನೆ ನೀಡಲಾಯಿತು.
ಪ್ರಾಂಶುಪಾಲ ಡಾ.ತಿರುಮಲೇಶ್ವರ ಭಟ್, ಉಪಪ್ರಾಂಶುಪಾಲ ಡಾ.ಗಣೇಶ್ ಐತಾಳ್, ಸಂಸ್ಥೆಯ ಡೀನ್‌ಗಳಾದ ಡಾ.ವಾಸುದೇವ, ಡಾ. ಸುದರ್ಶನ್ ರಾವ್ ಉಪಸ್ಥಿತರಿದ್ದರು. ಗಣಕಯಂತ್ರ ವಿಭಾಗದ ಮುಖ್ಯಸ್ಥ ಡಾ. ನಾಗರಾಜ್ ಭಟ್ ಕಾರ್ಯಕ್ರಮ ಆಯೋಜಿಸಿದ್ದರು. ವೇಣುಗೋಪಾಲ್ ರಾವ್ ನಿರೂಪಿಸಿದರು.
Kshetra Samachara
25/10/2020 10:23 am